ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ಪದೇ ಪದೇ ತರಾಟೆ ತೆಗೆದುಕೊಳ್ಳುತ್ತಿರುವ ಹೈಕೋರ್ಟ್

ಬೆಂಗಳೂರು -ರಾಜಧಾನಿ ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ವ್ಯವಸ್ಥೆಯನ್ನು ಪಾರದರ್ಶಕ ಗೊಳಿ ಸದ ಬಿಬಿಎಂಪಿ ವಿರುದ್ಧ ಹೈಕೋರ್ಟ್ ಮತ್ತೊಮ್ಮೆ ಗರಂ ಆಗಿದೆ. ಇಂದು ನಡೆದ ವಿಚಾರಣೆಯಲ್ಲಿ ಸಲಹೆ ನೀಡಿದ ಹೈಕೋರ್ಟ್, ಗುಂಡಿ ಮುಕ್ತ ರಸ್ತೆಯನ್ನಾಗಿಸುವವರೆಗೂ ಪಿಐಎಲ್ ಮುಕ್ತಾಯಗೊಳಿಸುವುದಿಲ್ಲ ಎಂದು ವಿಚಾರಣೆಯನ್ನು ಜುಲೈ 27 ಕ್ಕೆ ನಿಗದಿಪಡಿಸಿತ್ತು.

ಅಷ್ಟರಲ್ಲಿ ಗುಂಡಿ ಮುಚ್ಚುವ ಕಾಮಗಾರಿಯಲ್ಲಿ ಆಗಿರುವ ಪ್ರಗತಿಯ ಕುರಿತು ವಿವರ ಸಲ್ಲಿಸಬೇಕು ಎಂದು ಆದೇಶಿಸಿತ್ತು. ಮಹಾನಗರದಲ್ಲಿ ಯಾವ್ಯಾವ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂಬ ಬಗ್ಗೆ ವಸ್ತುಸ್ಥಿತಿ ವರದಿ ಸಲ್ಲಿಸಲು ಹೈಕೋರ್ಟ್ ಆಗಸ್ಟ್ 3 ರವರೆಗೆ ಬಿಬಿಎಂಪಿಗೆ ಗಡುವು ನೀಡಿದೆ.

ಕೋರಮಂಗಲದ ವಿಜಯನ್ ಮೆನನ್ 2015ರಲ್ಲಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ಪೀಠ ನಿನ್ನೆ ವಿಚಾರಣೆ ನಡೆಸಿತು.

ಬೆಂಗಳೂರು: ರಾಜಧಾನಿಯಲ್ಲಿ ಬರೋಬ್ಬರಿ 576 ಕಿ.ಮೀ ರಸ್ತೆ ಗುಂಡಿ ಮುಚ್ಚುವ ಕಾರ್ಯ ಬಾಕಿಯಿದ್ದು, ಇದಕ್ಕಾಗಿ ಟೆಂಡರ್ ಪ್ರಕ್ರಿಯೆ ನಡೆಸಲು ಬಿಬಿಎಂಪಿ ಮುಂದಾಗಿದೆ. ರಸ್ತೆ ಗುಂಡಿ ವಿಚಾರ ಸಂಬಂಧ ಹೈಕೋರ್ಟ್ ಗೆ ಬಿಬಿಎಂಪಿ ಮಾಹಿತಿ ನೀಡಿದ್ದು, ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ (ಎಆರ್ ಟಿಎಸ್) ಸಂಸ್ಥೆ ಜಂಟಿಯಾಗಿ ನಡೆಸಿದ ಸರ್ವೇ ಪ್ರಕಾರ 847.56 ಕಿ.ಮೀ ಒಟ್ಟು ರಸ್ತೆಗುಂಡಿ ಸರಿಪಡಿಸಬೇಕಾಗಿತ್ತು ಎಂದು ಕೋರ್ಟ್ ಗೆ ಪಾಲಿಕೆ ಮಾಹಿತಿ ನೀಡಿದೆ.

Edited By : Nirmala Aralikatti
Kshetra Samachara

Kshetra Samachara

28/07/2022 07:19 pm

Cinque Terre

1.59 K

Cinque Terre

0

ಸಂಬಂಧಿತ ಸುದ್ದಿ