ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಳೆ ಅನಾಹುತ ತಪ್ಪಿಸಲು ಬಿಬಿಎಂಪಿ ಸನ್ನದ್ಧ : ಗೌರವ್ ಗುಪ್ತ

ಬೆಂಗಳೂರು-ನಗರದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಸಂಭವನಿಯ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ನಿನ್ನೆ ಒಂದೇ ದಿನದಲ್ಲಿ 60 ಮಿ.ಮೀ ಗೂ ಹೆಚ್ಚು ಮಳೆಯಾಗಿದೆ. ಹೀಗಾಗಿ ಕೆಲವು ಕಡೆ ಅನಾಹುತಗಳಾಗಿವೆ ಎಂದರು. ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ನಾವು ನಮ್ಮ ಸಿಬ್ಬಂದಿಗಳಿಗೆ ಅಲರ್ಟ್ ಆಗಿರುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಮಳೆ ಅನಾಹುತ ಹೆಚ್ಚಾಗಿರುವ ಉತ್ತರಹಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಇದರ ಜತೆಗೆ ಬಿದ್ದಿರುವ ಮರಗಳನ್ನು ಕೂಡಲೆ ತೆರವುಗೊಳಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದೇನೆ ಎಂದು ಹೇಳಿದರು.

Edited By :
PublicNext

PublicNext

02/05/2022 06:53 pm

Cinque Terre

32.77 K

Cinque Terre

1

ಸಂಬಂಧಿತ ಸುದ್ದಿ