ಮಹದೇವಪುರ: ಬೆಂಗಳೂರು ಪೂರ್ವದ ಮಹದೇವಪುರ ವಿಧಾನಸಭಾ ಕ್ಷೇತ್ರದ ಕಾವೇರಿನಗರದಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಮನೆ ಕಾಂಪೌಂಡ್ ಕುಸಿದು ಬಿದ್ದು ವೃದ್ಧೆ ಮುನಿಯಮ್ಮ ಸಾವನ್ನಪ್ಪಿದ್ದಾರೆ.
ಕಾವೇರಿ ನಗರಕ್ಕೆ ಹೊಂದಿಕೊಂಡಿರುವ ಗೋದ್ರೆಜ್ ಕಂಪನಿಯ ಕಾಂಪೌಂಡ್ ಕುಸಿತದಿಂದ ದುರಂತ ಸಂಭವಿಸಿದೆ. ಮನೆಯಲ್ಲಿದ್ದ ಮತ್ತೊಬ್ಬರಿಗೆ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅರವಿಂದ ಲಿಂಬಾವಳಿ ರವರ ವಿಧಾನಸಭಾ ಕ್ಷೇತ್ರದಲ್ಲಿ ದುರಂತ ಸಂಭವಿಸಿದ್ದು, ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು & ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Kshetra Samachara
18/06/2022 12:06 pm