ವರದಿ: ಗಣೇಶ್ ಹೆಗಡೆ
ಬೆಂಗಳೂರು: ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ಬೆಂಗಳೂರು ನಮ್ಮ ಮೆಟ್ರೋ ಕಾರ್ಯನಿರ್ವಹಿಸುವ ಅವಧಿಯನ್ನು ಪರಿಷ್ಕರಿಸಲಾಗಿದೆ.
ಮೆಟ್ರೋ ರೈಲು ಸೇವೆಯ ಸಮಯವನ್ನು ಬೆಳಗ್ಗೆ 6 ರಿಂದ ರಾತ್ರಿ 11ರ ವರೆಗೆ ವಿಸ್ತರಣೆ ಮಾಡಲಾಗಿದೆ. ಕೊರೊನಾ ಕಾರಣದಿಂದ ಈ ಮೊದಲು ರೈಲು ಓಡಾಟದ ಅವಧಿ ಬೆಳಗ್ಗೆ 7 ಗಂಟೆಯಿಂದ ಸಂಜೆ 8 ಗಂಟೆ ವರೆಗೆ ಮಾತ್ರ ಇತ್ತು. ಇದೀಗ ತಡರಾತ್ರಿ ವರೆಗೂ ವಿಸ್ತರಿಸಲಾಗಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಆದರೆ, ದಿನದ ಈ ಕೊನೆ ರೈಲು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ರಾತ್ರಿ 11.30ಕ್ಕೆ ಮಾತ್ರ (ಮೆಜೆಸ್ಟಿಕ್) ಬಿಡಲಿದ್ದು, ನಗರದ ನಾಲ್ಕು ದಿಕ್ಕುಗಳಿಗೂ ಸಂಚಾರ ಸಾಧ್ಯವಾಗಲಿದೆ.
ಬೆಂಗಳೂರಲ್ಲಿ ಕೋವಿಡ್ ಇಳಿಮುಖವಾದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿ ವಿಸ್ತರಣೆ ಮಾಡುವಂತೆ ಪ್ರಯಾಣಿಕರಿಂದ ಆಗ್ರಹ ಕೇಳಿ ಬಂದಿತ್ತು.
Kshetra Samachara
16/11/2021 08:16 pm