ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದಾಗಿ ಸಾವು-ನೋವುಗಳ ಸಂಖ್ಯೆ ಹೆಚ್ಚುತ್ತಿದ್ದರೂ ಬಿಬಿಎಂಪಿ ಎಚ್ಚೆತ್ತುಕೊಂಡಿಲ್ಲ. ಇದರಿಂದಾಗಿ ಜನ ರೋಸಿಹೋಗಿದ್ದಾರೆ.
ಇದೇ ವಿಚಾರವಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ಸುಮ್ಮನಹಳ್ಳಿಯ ಮುಖ್ಯ ರಸ್ತೆಯಲ್ಲಿ ವಿನೂತನ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾಕಾರರು ಅಣುಕು ಶವವನ್ನು ರಸ್ತೆ ಗುಂಡಿಯಲ್ಲಿ ಮುಚ್ಚಿ ಶವಸಂಸ್ಕಾರ ಮಾಡಿ ಬಿಬಿಎಂಪಿ ವಿರುದ್ಧ ಘೋಷಣೆ ಕೂಗಿದರು.
Kshetra Samachara
26/11/2021 12:19 pm