ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಮ್ಮ ಮೆಟ್ರೋ ಪ್ರಯಾಣಿಕರ ಪರದಾಟ

ಬೆಂಗಳೂರು: ನಮ್ಮ ಮೆಟ್ರೋ ರೈಲು ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿ ನಡೆಯುತ್ತಿದೆ. ಇದರಿಂದಾಗಿ ಎಂ.ಜಿ.ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ರೈಲುಗಳ ಸಂಚಾರ ಶನಿವಾರ ಸಂಜೆ 5ರಿಂದ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಿಕರು ಸಮಸ್ಯೆ ಎದುರಿಸಿದರು.

ನೇರಳೆ ಮಾರ್ಗದಲ್ಲಿ ಕೆಂಗೇರಿ–ಎಂ.ಜಿ.ರಸ್ತೆ ನಡುವೆ ಮಾತ್ರ ರೈಲುಗಳು ಸಂಚರಿಸಿದವು. ಇದರ ಅರಿವಿಲ್ಲದೆ ಟ್ರಿನಿಟಿ, ಹಲಸೂರು, ಇಂದಿರಾನಗರ, ಸ್ವಾಮಿ ವಿವೇಕಾನಂದ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳಿಂದ ರೈಲು ಹತ್ತಲು ಬಂದ ಪ್ರಯಾಣಿಕರು ಗೊಂದಲಕ್ಕೊಳಗಾದರು. ರೈಲು ಸಂಚಾರ ವ್ಯತ್ಯಯವಾದ ಮಾಹಿತಿ ತಿಳಿದು ಬೇರೆ ವಾಹನ ಬಳಸಿದರು.

Edited By : Vijay Kumar
Kshetra Samachara

Kshetra Samachara

05/12/2021 12:29 pm

Cinque Terre

230

Cinque Terre

0

ಸಂಬಂಧಿತ ಸುದ್ದಿ