ಬೆಂಗಳೂರು: ಸರ್ಕಾರಗಳು ರಸ್ತೆ ಅಭಿವೃದ್ಧಿಗೆಂದೇ ಕೋಟ್ಯಂತರ ರೂ. ಬಿಡುಗಡೆ ಮಾಡುತ್ತವೆ. ಆದರೆ, ಹಣ ಉಪಯೋಗವಾದ್ರೂ ರಸ್ತೆಗಳು ಮಾತ್ರ ದೀರ್ಘಕಾಲ ಬಾಳಿಕೆ ಬರೋದಿಲ್ಲ.
ಹೌದು, ಮಹದೇವಪುರ ಕ್ಷೇತ್ರದ ಬಿದರಹಳ್ಳಿಯಿಂದ ಕಾಡ ಅಗ್ರಹಾರ ಮೂಲಕ ಹೆಣ್ಣೂರು- ಬೈರತಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಡಾಂಬರೀಕರಣಗೊಳಿಸಿದ ಕೇವಲ 3 ತಿಂಗಳಲ್ಲಿಯೇ ಹೊಂಡಗಳು ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ.
ಶಾಸಕರ ವಿಶೇಷ ಅನುದಾನದಲ್ಲಿ ಡಾಂಬರೀಕರಣ ಮಾಡಲಾಗಿತ್ತು. ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದರಿಂದ ಕೆಲವೇ ದಿನಗಳಲ್ಲಿ ರಸ್ತೆಯಲ್ಲಿ ಗುಂಡಿಗಳು ಬಿದ್ದು ದಿನನಿತ್ಯ ಸಾವಿರಾರು ವಾಹನ ಸವಾರರು ಸಂಕಷ್ಟ ಎದುರಿಸುತ್ತಿದ್ದಾರೆ.
ಈ ಬಗ್ಗೆ ಸ್ಥಳೀಯ ನಿವಾಸಿ ಸಂಪತ್ ಪ್ರತಿಕ್ರಿಯಿಸಿ, ರಸ್ತೆ ಮಧ್ಯೆಯೇ ಗುಂಡಿಗಳು ಬಿದ್ದು ಸಂಚಾರಕ್ಕೆ ತೊಡಕಾಗಿದೆ. ಹಲವು ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ ಎಂದರು.
ರಸ್ತೆ ಅಭಿವೃದ್ಧಿಗೊಳಿಸಲು ಶಾಸಕರು ಅನುದಾನ ತಂದಿದ್ದಾರೆ. ಆದರೆ, ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಳಪೆ ಗುಣಮಟ್ಟದ ಕಾಮಗಾರಿ ಕೈಗೊಂಡಿರುವುದರಿಂದ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ ಎಂದು ವಾಹನ ಸವಾರರು ಬೇಸರ ವ್ಯಕ್ತಪಡಿಸಿದ್ದಾರೆ
Kshetra Samachara
05/12/2021 04:31 pm