ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಮಿಲ್ಲರ್ಸ್ ರಸ್ತೆ ಯಲ್ಲಿ ಪೈಪ್ ಲೈನ್ ಅಳವಡಿಕೆ ಕಾಮಗಾರಿ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮಾರ್ಗ ಸುತ್ತಮುತ್ತ ಸಂಚಾರ ಬದಲಾವಣೆ ಮಾಡಲಾಗಿದೆ. ಪ್ಯಾಲೇಸ್ ರಸ್ತೆ ಹಾಗೂ ಕನ್ನಿಂಗ್ ಹ್ಯಾಮ್ ರಸ್ತೆಯ ಪ್ರಸ್ತುತ ಮಾರ್ಗದಲ್ಲಿ ಬದಲಾವಣೆ ಆಗಲಿದೆ. ಇಂದಿನಿಂದ ಕಾಮಗಾರಿ ಆರಂಭವಾಗಲಿದೆ.
ಕನ್ನಿಂಗ್ ಹ್ಯಾಮ್ ರಸ್ತೆಯ ಅವಿನಾಶ್ ಪೆಟ್ರೋಲ್ ಬಂಕ್ ಜಂಕ್ಷನ್ ನಿಂದ ಹೈಗ್ರೌಂಡ್ಸ್ ಜಂಕ್ಷನ್ ವರೆಗೆ ಇರುವ ಏಕಮುಖ ಸಂಚಾರ ವ್ಯವಸ್ಥೆಯನ್ನು ದ್ವಿಮುಖವಾಗಿ ಪರಿವರ್ತಿಸಲಾಗಿದೆ. ಅವಿನಾಶ್ ಪೆಟ್ರೋಲ್ ಬಂಕ್ ಜಂಕ್ಷನ್ ನಿಂದ ಚಂದ್ರಿಕಾ ವೃತ್ತದ ವರೆಗೆ ಪಶ್ಚಿಮದಿಂದ ಪೂರ್ವಕ್ಕೆ ವಾಹನ ಸಂಚಾರ ನಿರ್ಬಂಧಿಸಿ , ತಾತ್ಕಾಲಿಕವಾಗಿ ಚಂದ್ರಿಕಾ ಜಂಕ್ಷನ್ ನಿಂದ ಅವಿನಾಶ್ ಪೆಟ್ರೋಲ್ ಬಂಕ್ ಜಂಕ್ಷನ್ ವರೆಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
Kshetra Samachara
17/12/2021 09:08 am