ಬೆಂಗಳೂರು: ಡಿ.20 ರಿಂದ ಬೆಳಿಗ್ಗೆ 5ರಿಂದ ರಾತ್ರಿ 11 ಗಂಟೆಯವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ. ಮೆಜೆಸ್ಟಿಕ್ನಿಂದ 11:30ಕ್ಕೆ ಕೊನೆಯ ರೈಲು ಸಂಚರಿಸಲಿದೆ.
ಭಾನುವಾರ ಬೆಳಿಗ್ಗೆ ಒಂದು ತಾಸು ತಡವಾಗಿ, ಎಂದರೆ 7 ಗಂಟೆಯಿಂದ ಸೇವೆ ಆರಂಭವಾಗಲಿದೆ. ಕೊರೊನಾ ಪಿಡುಗು ಹರಡುವ ಮೊದಲು ಇದ್ದ ವೇಳಾಪಟ್ಟಿಯ ಮಾದರಿಯಲ್ಲಿಯೇ ಡಿಸೆಂಬರ್ 20ರಿಂದ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ.
ಕೊರೋನಾ ಅನ್ಲಾಕ್ ಆದ ಬಳಿಕ ಹಂತಹಂತವಾಗಿ ನಮ್ಮ ಮೆಟ್ರೋ ಸೇವೆಯ ಅವಧಿ ವಿಸ್ತರಣೆಯಾಗಿತ್ತು. ಈವರೆಗೆ ಬೆಳಿಗ್ಗೆ 7ರಿಂದ ರಾತ್ರಿ 10ರವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸುತ್ತಿದ್ದವು. ಪ್ರಯಾಣಿಕರ ಕೊರತೆ ಕಾರಣದ ಹಿನ್ನೆಲೆಯಲ್ಲಿ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ.
ಇನ್ನೂ ಬೆಳಗ್ಗೆ 5 ಗಂಟೆಗೆ ಮೆಜಸ್ಟಿಕ್ ನಲ್ಲಿ ಜನರು ಮೆಟ್ರೋ ಕಾಯ್ತಿರುವ ದ್ರಶ್ಯ ಸಾಮಾನ್ಯವಾಗಿದೆ. ಇದನ್ನು ಅರಿತು ಸಮಯ ಮುಂಜಾನೆ ಮುಂಚೆ ಮಾಡಿದೆ ಬಿ.ಎಂ.ಆರ್.ಸಿ.ಎಲ್
Kshetra Samachara
18/12/2021 07:16 pm