ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ವಿಮಾನ ನಿಲ್ದಾಣ ಭದ್ರತೆಗೆ ಬಂದ ಬೆಲ್ಜಿಯನ್ ಡಾಗ್

ದೇವನಹಳ್ಳಿ:ಬಾಂಬ್ ಪತ್ತೆ ಹಚ್ಚಲು ಮತ್ತು ಸ್ಪೋಟಕಗಳನ್ನ ನಾಶ ಪಡಿಸುವ ಕಾರ್ಯದಲ್ಲಿ ವಿಶೇಷ ಪರಿಣಿತಿ ಇರುವ ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಶ್ವಾನಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತೆಗಾಗಿ ಸೇರ್ಪಡೆಯಾಗಲಿವೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತೆಯನ್ನ ನೋಡಿಕೊಳ್ಳುತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಗೆ ವಿಶೇಷ ತರಬೇತಿ ಪಡೆದಿರುವ ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಆರು ಶ್ವಾನಗಳು ಸೇರ್ಪಡೆಯಾಗಲಿವೆ.

ಪೊಲೀಸ್ ಮತ್ತು ಮಿಲಿಟರಿ ಪಡೆಗಳ ಕಾರ್ಯಾಚರಣೆಯಲ್ಲಿ ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಶ್ವಾನಗಳನ್ನ ಬಳಕೆ ಮಾಡಲಾಗುತ್ತದೆ. ಬಾಂಬ್ ಪತ್ತೆ ಮತ್ತು ಸ್ಪೋಟಕಗಳ ನಾಶ ಪಡೆಸುಯುವಲ್ಲಿ ವಿಶೇಷವಾದ ಬುದ್ಧಿವಂತಿಕೆಯನ್ನ ಈ ಶ್ವಾನಗಳು ಹೊಂದಿವೆ. ಈ ಶ್ವಾನಗಳು ಡಿಸೆಂಬರ್ 16 ರಂದು ತರಬೇತಿ ಪೂರ್ಣಗೊಳಿಸುತ್ತಿದ್ದು, ಶೀಘ್ರದಲ್ಲಿಯೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಐಎಸ್ ಎಫ್ ತಂಡಕ್ಕೆ ಸೇರ್ಪಡೆಗೊಳ್ಳಲಿವೆ.

2011 ಮೇ 2 ರಲ್ಲಿ ಪಾಕಿಸ್ತಾನದಲ್ಲಿ ಆಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಪತ್ತೆ ಹಚ್ಚಿ ಹತ್ಯೆ ಮಾಡುವಲ್ಲಿ ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಶ್ವಾನ ಅಮೇರಿಕಾದ ನೌಕ ಪಡೆಗೆ ನೆರವಾಗಿತ್ತು. ಹಾಗೆಯೇ ಅಕ್ಟೋಬರ್ 27,2019ರಲ್ಲಿ ಸಿರಿಯಾದಲ್ಲಿ ಐಸಿಸ್ ಮುಖಂಡ ಅಬು ಬಕರ್ ಅಲ್ ಬಗ್ದಾದಿ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿತ್ತು.

Edited By :
Kshetra Samachara

Kshetra Samachara

21/12/2021 11:24 am

Cinque Terre

1.11 K

Cinque Terre

0

ಸಂಬಂಧಿತ ಸುದ್ದಿ