ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಎಂಟಿಸಿ ಬಸ್ ಪ್ರಯಾಣ ಗುರುತಿನ ಚೀಟಿ ಕಡ್ಡಾಯ

ಬೆಂಗಳೂರು :ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ವಾರಾಂತ್ಯ ಕರ್ಫ್ಯೂ ನಿಯಮಾವಳಿಗಳಿಗೆ ಅನುಗುಣವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ.

ವಾರಾಂತ್ಯ ಕರ್ಫ್ಯೂ ಇರುವ ದಿನಗಳಲ್ಲಿಯೂ ಬೆಳಿಗ್ಗೆ 6ರಿಂದ ರಾತ್ರಿ 10 ಗಂಟೆವರೆಗೆ ಬಸ್ ಗಳ ಸಂಚಾರ ಇರುತ್ತದೆ. ಅಗತ್ಯ ಸೇವೆಗಳಡಿ ಕೆಲಸ ಮಾಡುವ ಸಿಬ್ಬಂದಿಗೆ ಮಾತ್ರ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸಂಸ್ಥೆಯು ಸ್ಪಷ್ಟಪಡಿಸಿದೆ.

ಕೊರೊನಾ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಾರಿಗೆ ನಿಗಮದ ಬಸ್ಗಳಲ್ಲಿ ಸಂಚರಿಸಲು ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಸರ್ಕಾರದ ಆದೇಶದ ಅನ್ವಯ ಅನುಮತಿ ಪಡೆದ ಇತರ ವಲಯಗಳ ಸಿಬ್ಬಂದಿಗೂ ಪ್ರಯಾಣಕ್ಕೆ ಅವಕಾಶವಿದೆ.

ಪ್ರಯಾಣದ ವೇಳೆ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತಮ್ಮೊಡನೆ ಇರಿಸಿಕೊಂಡಿರಬೇಕು. ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೂ ಪ್ರವೇಶ ಪತ್ರವನ್ನು ಕಡ್ಡಾಯಗೊಳಿಸಲಾಗಿದೆ. ಬಸ್ನಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆಸ್ಪತ್ರೆಗೆ ತೆರಳುವ ರೋಗಿ ಮತ್ತು ಸಹಾಯಕರ ಪ್ರಯಾಣಕ್ಕೆ ಅವಕಾಶವಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ಸಿಬ್ಬಂದಿ, ಸರ್ಕಾರಿ, ಖಾಸಗಿ ಬ್ಯಾಂಕ್, ವಿಮಾ ಇಲಾಖೆ ಸಿಬ್ಬಂದಿಗೂ ಅವಕಾಶವಿದೆ.

ವೀಕೆಂಡ್ ಕರ್ಫ್ಯೂ ವೇಳೆ ಜನಸಾಮಾನ್ಯರಿಗೆ ಬಿಎಂಟಿಸಿ ಬಸ್ಗಳ ಸಂಚಾರ ಇರುವುದಿಲ್ಲ.ಅಗತ್ಯ ಸೇವೆಗಳಿಗೆ ಮಾತ್ರ ಬಿಎಂಟಿಸಿ ಬಸ್ ಗಳು ಸಂಚರಿಸಲಿವೆ. ಶನಿವಾರ, ಭಾನುವಾರ ಪ್ರಯಾಣಕ್ಕೆ ಬಿಎಂಟಿಸಿ ಬಸ್ ಸಿಗುವುದಿಲ್ಲ. ತುರ್ತು, ಅಗತ್ಯ ಸೇವೆಗಳಿಗೆ ಮಾತ್ರ ವಿಶೇಷ ಬಸ್ಗಳ ಸೇವೆ ಇರಲಿದೆ.

Edited By : Nirmala Aralikatti
Kshetra Samachara

Kshetra Samachara

05/01/2022 03:37 pm

Cinque Terre

622

Cinque Terre

0

ಸಂಬಂಧಿತ ಸುದ್ದಿ