ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೀಕೆಂಡ್ ಕರ್ಫ್ಯೂ : ನಮ್ಮ ಮೆಟ್ರೋ ರೈಲು ಸಂಚಾರ ಹೇಗಿರಲಿದೆ

ಬೆಂಗಳೂರು - ವೀಕೆಂಡ್ ಲಾಕ್ ಡೌನ್ ವೇಳೆ ಬೆಂಗಳೂರು ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ಸಮಯ ನಿಗದಿ ಮಾಡಲಾಗಿದೆ. ನಾಗಸಂದ್ರ ಮೆಟ್ರೋ ನಿಲ್ದಾಣ, ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣ, ಕೆಂಗೇರಿ ಮೆಟ್ರೋ ನಿಲ್ದಾಣ, ಬೈಯ್ಯಪ್ಪನಹಳ್ಳಿಯಿಂದ ಸಂಚಾರ ಮಾಡುವ ಮೆಟ್ರೋ ರೈಲುಗಳಿಗೆ ಸಮಯ ನಿಗದಿಪಡಿಸಲಾಗಿದೆ.

ಬೆಳಗ್ಗೆ 8 ಗಂಟೆಯಿಂದ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಪ್ರತಿ 20 ನಿಮಿಷಕ್ಕೊಮ್ಮೆ ನಮ್ಮ ಮೆಟ್ರೋ ರೈಲು ಸಂಚಾರ ಇರಲಿದೆ ಎಂದು ಹೇಳಲಾಗಿದೆ.

ಬೆಳಗ್ಗೆ 8 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮೆಟ್ರೋ ರೈಲು ಕಾರ್ಯಾಚರಣೆ ಮಾಡಲಿದೆ. ಉಳಿದಂತೆ ವಾರದ 5 ದಿನಗಳಲ್ಲಿ ಮೆಟ್ರೋ ಎಂದಿನಂತೆ ಸಂಚರಿಸಲಿದೆ ಎಂದು ಬಿಎಂಆರ್ ಸಿಎಲ್ ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

05/01/2022 05:53 pm

Cinque Terre

342

Cinque Terre

0

ಸಂಬಂಧಿತ ಸುದ್ದಿ