ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾದೇವಪುರ: ರಸ್ತೆ ದುರಸ್ತಿಗೆ ಅಧಿಕಾರಿಗಳ ನಿರ್ಲಕ್ಷ್ಯ; ಸಾರ್ವಜನಿಕರ ಆಕ್ರೋಶ

ಮಹಾದೇವಪುರ: ಮಹದೇವಪುರ ಕ್ಷೇತ್ರದ ಹೂಡಿ ವಾರ್ಡ್‌ನ ಬೈರತಿ ಗ್ರಾಮದ ಅಪ್ಪಯ್ಯ ಸ್ವಾಮಿ ದೇವಾಲಯದ 7ನೇ ಅಡ್ಡರಸ್ತೆಯಲ್ಲಿ ಯುಜಿಡಿ ಹಾಗೂ ಒಳಚರಂಡಿ ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಕಳೆದರೂ ರಸ್ತೆ ದುರಸ್ತಿಗೆ ಅಧಿಕಾರಿಗಳು ಮುಂದಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರಸ್ತೆ ಉದ್ದಗಲಕ್ಕೂ ದೊಡ್ಡದಾದ ಹೊಂಡ-ಗುಂಡಿಗಳಿಂದ ಕೂಡಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗಿದೆ. ಸಾರ್ವಜನಿಕರು, ಅಧಿಕಾರಿಗಳಿಗೆ ಹಿಡಿಶಾಪ ಹಾಕಿಕೊಂಡೇ ಇಲ್ಲಿ ಸಂಚರಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಮುಂದಾಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Edited By : Shivu K
Kshetra Samachara

Kshetra Samachara

12/01/2022 12:20 pm

Cinque Terre

458

Cinque Terre

0

ಸಂಬಂಧಿತ ಸುದ್ದಿ