ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ರಸ್ತೆಯುದ್ದಕ್ಕೂ ಚರಂಡಿ ನೀರು ಹರಿಯುತ್ತಿರುವುದರಿಂದ ಬೇಸತ್ತ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೂರ್ವ ತಾಲ್ಲೂಕಿನ ಕೆಆರ್ ಪುರದ ರಾಷ್ಟ್ರೀಯ ಹೆದ್ದಾರಿ 75 ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ ಈ ರಸ್ತೆಯಲ್ಲಿ ಚರಂಡಿಯ ಕೊಳಚೆ ನೀರು ರಸ್ತೆ ಮೇಲೆಯೇ ಹರಿಯುತ್ತಿದ್ದು ವಾಹನ ಸವಾರರಿಗೆ ತಲೆನೋವಾಗಿದೆ.
ಈ ರಾಷ್ಟ್ರೀಯ ಹೆದ್ದಾರಿಯು ಕೋಲಾರ, ಚಿಕ್ಕಬಳ್ಳಾಪುರ, ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುತ್ತಿದ್ದು, ಅಧಿಕಾರಿಗಳು ಸ್ವಚ್ಚತಾ ಕಾರ್ಯಕ್ಕೆ ಮುಂದಾಗಬೇಕಿದೆ.
Kshetra Samachara
20/01/2022 10:40 pm