ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ವ್ಯಾಪ್ತಿಯಲ್ಲಿ ಮಾತ್ರ ಸಂಚರಿಸುತ್ತಿದ್ದ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್‌ಗಳು ಇನ್ಮುಂದೆ ಸುತ್ತಲಿನ ಕೆಲವು ನಗರಗಳಲ್ಲಿ ಸಂಚರಿಸಲಿವೆ. ಬರುವ ಮೂರು ತಿಂಗಳಲ್ಲಿ ಕೆಸ್‌ಆರ್‌ಟಿಸಿ ಪಾಲಿಗೆ ಎಲೆಕ್ಟ್ರಿಕ್ ಬಸ್ ಬರಲಿದೆ. ಇದಕ್ಕಾಗಿ ಗುತ್ತಿಗೆ ಆಧಾರದಲ್ಲಿ 50 ಬಸ್‌ಗಳನ್ನು ಪಡೆಯುವ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಇನ್ನು ಹೈದರಾಬಾದ್‌ನ ಇವಿ ಟ್ರಾನ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿಗೆ ಇದರ ಗುತ್ತಿಗೆ ನೀಡಲಾಗಿದೆ.
‘ಬಹುತೇಕ ಏಪ್ರಿಲ್‌ನಲ್ಲಿ ಮೊದಲ ಎಲೆಕ್ಟ್ರಿಕ್ ಬಸ್ ಕೆಸ್‌ಆರ್‌ಟಿಸಿಗೆ ಬರಲಿದೆ. ಅದರ ಕಾರ್ಯಕ್ಷಮತೆ ಪರಿಶೀಲಿಸಿ ಒಪ್ಪಿಗೆ ಸೂಚಿಸಿದರೆ ಮುಂದಿನ ಮೂರು ತಿಂಗಳಲ್ಲಿ ಉಳಿದ ಬಸ್‌ಗಳು ನಿಗಮಕ್ಕೆ ಸೇರ್ಪಡೆಯಾಗಲಿವೆ. ಈ ಬಸ್‌ಗಳಿಗೆ ಕೆಎಸ್‌ಆರ್‌ಟಿಸಿಯಿಂದ ನಿರ್ವಾಹಕರನ್ನು ನಿಯೋಜಿಸಲಾಗುವುದು. ದಿನಕ್ಕೆ ಕನಿಷ್ಠ 450 ಕಿಲೋ ಮೀಟರ್ ಸಂಚರಿಸಲು ನಿಗಮ ವ್ಯವಸ್ಥೆ ಮಾಡಿಕೊಡಬೇಕಾಗಿದೆ. ಗುತ್ತಿಗೆ ಪಡೆದ ಕಂಪನಿಯೇ ಚಾಲಕರನ್ನು ಒದಗಿಸಲಿದೆ. ಪ್ರತಿ ಕಿಲೋ ಮೀಟರ್‌ಗೆ ₹55 ಮೊತ್ತವನ್ನು ಕಂಪನಿಗೆ ಕೆಎಸ್‌ಆರ್‌ಟಿಸಿ ಪಾವತಿಸಲಿದೆ’ ಎಂದು ಹೇಳಿದರು. ಅಂದರೆ ದಿನಕ್ಕೆ ₹24,750 ಮೊತ್ತ ಪಾವತಿಸಬೇಕಾಗುತ್ತದೆ. ದಿನಕ್ಕೆ ನಿಗದಿತ ದೂರ ಸಂಚರಿಸದಿದ್ದರೂ, ಅಷ್ಟೂ ಮೊತ್ತ ಪಾವತಿಸಬೇಕಾಗುತ್ತದೆ.
PublicNext
22/01/2022 09:26 am