ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್: ಕುಡಿಯುವ ನೀರು ಪೈಪ್ಲೈನ್ ಜೋಡಣೆಗೆ ಲಂಚ ಪಡೀತಾರೆ ವಾಟರ್ ಮ್ಯಾನ್ ?

ಆನೇಕಲ್: ಪಟ್ಟಣದ ಸಮಂದುರು ಗ್ರಾಮ ಪಂಚಾಯತಿಯಲ್ಲಿ ಕುಡಿಯುವ ನೀರು ಪೈಪ್ಲೈನ್ ಮಾಡಿಕೊಡಲು ಸುಮಾರು 2 ಸಾವಿರದಿಂದ 5 ಸಾವಿರ ವರಗೆ ವಾಟರ್ ಮ್ಯಾನ್ ಗೆ ಲಂಚ ಕೊಡಬೇಕು ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿ ನಾರಾಯಣ ಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ತಾಲೂಕು ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾನೂನು ರೀತಿಯಲ್ಲಿ ಇದಕ್ಕೆ ಅವಕಾಶವಿಲ್ಲ. ಒಂದೊಂದು ಗ್ರಾಮ ಪಂಚಾಯತಿಗಳಲ್ಲಿ ಒಂದೊಂದು ತರ ನಡಾವಳಿಗಳನ್ನು ಮಾಡಿಕೊಂಡಿರುತ್ತಾರೆ. ನಿಮಗೆ ಗೊತ್ತಿರುವ ಹಾಗೆ ಒಂದು ನಲ್ಲಿ ಪೈಪ್ಲೈನ್ ಕನೆಕ್ಷನ್ ಮಾಡಲು 2000 ಖರ್ಚು ಬರುತ್ತೆ.

ನಿಜ ಆದರೆ ಅದು ಬಿಟ್ಟು 3000 ತಗೊಂಡಿರೋದು ನಮ್ಮ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿ ಪರಿಶೀಲನೆ ಮಾಡುತ್ತೇನೆ. ತಪ್ಪು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಆನೇಕಲ್ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀನಾರಾಯಣಸ್ವಾಮಿ ತಿಳಿಸಿದರು.

Edited By : Manjunath H D
Kshetra Samachara

Kshetra Samachara

12/02/2022 09:06 pm

Cinque Terre

1.95 K

Cinque Terre

0

ಸಂಬಂಧಿತ ಸುದ್ದಿ