ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ರಾಕೇಶ್ ಸಿಂಗ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಗತಿಯಲ್ಲಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ನಗರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಭಾನುವಾರ ಪರಿಶೀಲನೆ ನಡೆಸಿದರು.

ಬಸವೇಶ್ವರ ವೃತ್ತದ ಮೂಲಕ ಮಿನ್ ಸ್ಕ್ವೇರ್ ಸಂಪರ್ಕಿಸುವ ರಾಜಭವನ ರಸ್ತೆ ಹಾಗೂ ಚಾಲುಕ್ಯ ವೃತ್ತದಿಂದ ಅಲಿ ಅಸ್ಕರ್, ಕನ್ನಿಂಗ್ ಹ್ಯಾಮ್ ರಸ್ತೆಗಳ ಮೂಲಕ ಕಂಟೋನ್‌ಮೆಂಟ್ ಸಂಪರ್ಕಿಸುವ ಮಿಲ್ಲರ್ಸ್ ರಸ್ತೆಗಳ ಕಾಮಗಾರಿಗಳನ್ನು ಅವರು ಖುದ್ದು ಪರಿಶೀಲನೆ ನಡೆಸಿದರು.

ಚಂದ್ರಿಕಾ ಹೋಟೆಲ್‌ನಿಂದ ಅಂಬೇಡ್ಕರ್ ಭವನ ಸಂಪರ್ಕಿಸುವ ರಸ್ತೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ರಾಕೇಶ್ ಸಿಂಗ್ ಅವರು, BWSSB ಪೈಪ್‌ಲೈನ್ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಹೆಚ್ಚುವರಿ ಕೆಲಸಗಾರರನ್ನು ನಿಯೋಜಿಸಿ ಹಗಲು ರಾತ್ರಿ ಕೆಲಸ‌ ಮಾಡಿ ಈ ತಿಂಗಳ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು.

ಪರಿವೀಕ್ಷಣೆ ಸಂದರ್ಭದಲ್ಲಿ ಸ್ಮಾರ್ಟ್ ಸಿಟಿ ಮುಖ್ಯ ಇಂಜಿನಿಯರ್ ವಿನಾಯಕ ಸೂಗೂರು, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಂ ಆರ್ ಚಂದ್ರಶೇಖರ, ನೀರು ಸರಬರಾಜು ಮಂಡಳಿ ಹೆಚ್ಚುವರಿ ಮುಖ್ಯ ಇಂಜಿನಿಯರ್ ಜಯಶಂಕರ್, ಕಾರ್ಯಪಾಲಕ ಇಂಜಿನಿಯರ್ ರಮೇಶ್, ಐಡೆಕ್ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಗಳು ಹಾಜರಿದ್ದರು.

Edited By : Vijay Kumar
Kshetra Samachara

Kshetra Samachara

21/02/2022 08:30 am

Cinque Terre

1.99 K

Cinque Terre

0

ಸಂಬಂಧಿತ ಸುದ್ದಿ