ದೊಡ್ಡಬಳ್ಳಾಪುರ: ನಂದಿಬೆಟ್ಟಕ್ಕೆ ರೋಪ್ ವೇ ಹಾಕುವುದು ಬಹುದಿನದ ಕನಸು, ರೋಪ್ ವೇ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, 93.40 ಕೋಟಿ ವೆಚ್ಚದಲ್ಲಿ ಯೋಜನೆ ತಯಾರಾಗಿದ್ದು, ರೋಪ್ ವೇ ಯೋಜನೆಗೆ ದೊಡ್ಡಬಳ್ಳಾಪುರ ತಾಲೂಕಿನ 3 ಎಕರೆ -20 ಗುಂಟೆ ಜಮೀನು ಸ್ವಾಧೀನವಾಗಿದೆ.
ನಂದಿಬೆಟ್ಟದಲ್ಲಿ ವಾಹನ ದಟ್ಟಣೆ ತಡೆಗಟ್ಟಲು ಮತ್ತು ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ರೋಪ್ ವೇ ಯೋಜನೆಯನ್ನ ರಾಜ್ಯ ಸರ್ಕಾರ ಜಾರಿ ಮಾಡಿದೆ, ನದಿಬೆಟ್ಟದ ತಪ್ಪಲಿನಿಂದ ಬೆಟ್ಟದ ತುದಿಗೆ 2.93 ಕಿ.ಮೀ ರೋಪ್ ವೇ ನಿರ್ಮಾಣ ಮಾಡಲಾಗುತ್ತಿದೆ, ರೋಪ್ ವೇ ನಿರ್ಮಾಣ ಮಾಡುವ ಜಾಗ ದೊಡ್ಡಬಳ್ಳಾಪುರ ತಾಲೂಕಿನ ಗಡಿ ಭಾಗದಲ್ಲಿ ಬರಲಿದೆ, ಇದೇ ಜಾಗದಲ್ಲಿ ತಾಲೂಕಿನ ಹೆಗ್ಗಡಿಹಳ್ಳಿಯ ರೈತರು ಬೇಸಾಯ ಮಾಡಿಕೊಂಡು ಬರುತ್ತಿದ್ದಾರೆ, ರೋಪ್ ವೇ ನಿರ್ಮಾಣಕ್ಕೆ ರೈತರು ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಿದ್ದರು..
ನಂದಿಬೆಟ್ಟಕ್ಕೆ ರೋಪ್ ವೇ ಯೋಜನೆಗೆ ರಾಜ್ಯ ಸರ್ಕಾರ 93.40 ಕೋಟಿ ಅನುಮೋದನೆ ನೀಡಿದ್ದು, ಯೋಜನೆಗಾಗಿ ಭೂಸ್ವಾಧೀನ ಪ್ರಾರಂಭವಾಗಿದೆ, ಈ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪವಿಭಾಗಧಿಕಾರಿ ಅರುಳ್ ಕುಮಾರ್ ಮತ್ತು ದೊಡ್ಡಬಳ್ಳಾಪುರ ತಹಶೀಲ್ದಾರ್ ಮೋಹನ್ ಕುಮಾರಿ ಸ್ಥಳಕ್ಕೆ ಭೇಟಿ ನೀಡಿ ಗಡಿ ರೇಖೆಯನ್ನ ಗುರುತಿಸಿದ್ದಾರೆ, ಕೃಷಿ ಮಾಡುತ್ತಿರುವ ರೈತರ ಬಳಿ ಸೂಕ್ತ ದಾಖಲೆ ಇಲ್ಲದ ಹಿನ್ನಲೆ ಹೆಗ್ಗಡಿಹಳ್ಳಿಯ ಸರ್ವೆ ನಂಬರ್ 94ರ 3 ಎಕರೆ 20 ಗುಂಟೆ ಜಮೀನುನನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ( KSTDC) ಹಸ್ತಾಂತರಿಸಿದರು.
Kshetra Samachara
23/02/2022 09:47 pm