ಬೆಂಗಳೂರು: ಕಳೆದ ಕೆಲವು ತಿಂಗಳಿಂದ ಚರ್ಚೆಯಲ್ಲಿರುವ ವಿದ್ಯುತ್ ದರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿ ರಾಜ್ಯದ ಜನರಿಗೆ ವಿದ್ಯುತ್ ದರ ಏರಿಕೆಯ(Electricity Bill) ಶಾಕ್ ಎದುರಾಗಿದೆ. ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿ ಕೆಇಆರ್ ಸಿ ಘೋಷಣೆ ಮಾಡಿದೆ. ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1ರಿಂದಲೇ ಪರಿಷ್ಕೃತ ದರ ಅನ್ವಯವಾಗಲಿದೆ. ಕಳೆದ ವರ್ಷ 30 ಪೈಸೆ ಹೆಚ್ಚಳ ಮಾಡಲಾಗಿತ್ತು. ಈ ಬಾರಿ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ.
ಬೆಸ್ಕಾಂ, ಚೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಸೇರಿದಂತೆ ಹೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದ್ದು ಏಪ್ರಿಲ್ 1ರಿಂದಲೇ ಪರಿಷ್ಕೃತ ದರ ಅನ್ವಯವಾಗಲಿದೆ. ಎಸ್ಕಾಂಗಳು 1 ರೂ. 85 ಪೈಸೆ ಹೆಚ್ಚಳಕ್ಕೆ ಮನವಿ ಸಲ್ಲಿಸಿದ್ದವು.
ಸಾಧಕ ಬಾಧಕ ಪರಿಶೀಲಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(KERC) 35 ಪೈಸೆ ಹೆಚ್ಚಿಸಿದೆ. ವಿದ್ಯುತ್ ದರ ಪರಿಷ್ಕರಣೆ ವಿಚಾರವಾಗಿ ವಸಂತನನಗರದ KERC ಕಚೇರಿಯಲ್ಲಿ ಅಧ್ಯಕ್ಷ ಮಂಜುನಾಥ್ ಸುದ್ದಿಗೋಷ್ಠಿ ನಡೆಸಿದ್ದು ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿರುವುದಾಗಿ ತಿಳಿಸಿದ್ದಾರೆ.
PublicNext
04/04/2022 07:39 pm