ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಬಲಿಗಾಗಿ ಕಾಯುತ್ತಿರುವ ರಸ್ತೆ ಗುಂಡಿಗಳು : ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿರುವ ಜನ

ಆನೇಕಲ್: ಇಲ್ಲಿ ಪ್ರತಿನಿತ್ಯ ವಾಹನ ಸವಾರರು ರಸ್ತೆ ಗುಂಡಿಗಳಿಂದಾಗಿ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಆನೇಕಲ್ ಪಟ್ಟಣದಿಂದ ಹಿಡಿದು ತಿಮ್ಮರಾಯ ಸ್ವಾಮಿ ದೇವಸ್ಥಾನದ ರಸ್ತೆ ಸಂಪರ್ಕಿಸುವ ವರಗೆ ಹಾಗೂ ಹೊಸೂರು ರಸ್ತೆ ಮಾರ್ಗದಲ್ಲಿ ಗುಂಡಿಗಳು ಬಿದ್ದು ಸಂಪೂರ್ಣವಾಗಿ ಹದಗೆಟ್ಟಿದೆ.. ಅಧಿಕಾರಿಗಳು ಮಾತ್ರ ಕಂಡು ಕಾಣದ ಹಾಗೆ ಮೌನ ವಹಿಸಿದ್ದಾರೆ. ಅದರಲ್ಲೂ ಈ ಭಾಗದಲ್ಲಿ ಅತಿ ಹೆಚ್ಚು ಶಾಲೆಗಳು ಇರೋದ್ರಿಂದ, ಕೆಲಸಕ್ಕೆ ಹೋಗುವ ನೌಕರರಿಗೆ, ಸಾರ್ವಜನಿಕರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ. ಆದಷ್ಟು ಬೇಗ ರಸ್ತೆಗುಂಡಿಗಳನ್ನು ಮುಚ್ಚುವಂತೆ ವಾಹನ ಸವಾರರಿಗೆ ಅನುಕೂಲ ಮಾಡಿಕೊಡುವಂತೆ ವಾಹನ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ..

ರಸ್ತೆ ಹೊಂಡಗಳು ಜನರ ಪಾಲಿಗೆ ಮೃತ್ಯು ಗುಂಡಿಗಳಾಗಿವೆ. ಸವಾರರು ರಸ್ತೆ ಹೊಂಡಗಳಿಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಗುಂಡಿ ತಪ್ಪಿಸಲು ಹೋಗಿ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಇನ್ನಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳತ್ತಾರಾ ಅನ್ನೋದನ್ನ ಕಾದುನೋಡಬೇಕಿದೆ.

Edited By : Shivu K
Kshetra Samachara

Kshetra Samachara

07/04/2022 02:41 pm

Cinque Terre

1.75 K

Cinque Terre

0

ಸಂಬಂಧಿತ ಸುದ್ದಿ