ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ತಿರುಮಗೊಂಡನಹಳ್ಳಿ ಯಲ್ಲಿ ಮೂಲಭೂತ ಸೌಕರ್ಯ ಮರೀಚಿಕೆಯಾಗಿದೆ. ಹೀಗಾಗಿ ಊರಿನ ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ವಿರುದ್ಧ ಕಿಡಿಕಾರಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇಲ್ಲಿನ ತಿರುಮಗೊಂಡನಹಳ್ಳಿಯಿಂದ ಹಿಡಿದು ಮರಸೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗದಲ್ಲಿ ಒಳಚರಂಡಿ ಅರ್ಧಕ್ಕೆ ನಿಂತು ಇಲ್ಲಿನ ಗ್ರಾಮಸ್ಥರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಹಾಗೂ ಚುನಾಯಿತ ಪ್ರತಿನಿಧಿಗಳ ವಿರುದ್ಧ ಊರಿನ ಗ್ರಾಮಸ್ಥರು ಶಾಪ ಹಾಕುತ್ತಿದ್ದಾರೆ. ಇನ್ನದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.
Kshetra Samachara
11/04/2022 09:02 pm