ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್- BWSSBಯಿಂದ ನೀರಿನ ದರ ಹೆಚ್ಚಳ...?

ಇನ್ ಸೈಡ್ ವರದಿ- ಗಣೇಶ್ ಹೆಗಡೆ

ಬೆಂಗಳೂರು: ಈಗಾಗಲೇ ರಾಜ್ಯ ರಾಜಧಾನಿ ಜನರು ವಿವಿಧ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಇದರ ನಡುವೆಯೂ ಈಗಾಗಲೇ ನಂದಿನ ಹಾಲಿನ ದರ ರೂ.3 ಹೆಚ್ಚಳಕ್ಕೆ ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಶಾಕ್ ನೀಡಿತ್ತು. ಈಗ ಬೆಲೆ ಏರಿಕೆಯಿಂದ ತತ್ತರಿಸಿರೋ ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಶಾಕ್ ನೀಡೋದಕ್ಕೆ ಮುಂದಾಗಿದೆ. ಅದೇ ಬೆಂಗಳೂರು ಜಲ ಮಂಡಳಿಯಿಂದ ನೀರಿನ ದರ ಹೆಚ್ಚಳವಾಗಲಿದೆ.

ಈ ಸಂಬಂದ ಬೆಂಗಳೂರು ಜಲ ಮಂಡಳಿಯು ರಾಜ್ಯ ಸರ್ಕಾರಕ್ಕೆ ನೀರಿನ ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಸಲ್ಲಿಸಿದೆ. 9 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆಯಲ್ಲಿ ಕೋರಿದೆ. ಈಗಾಗಲೇ 2 ವರ್ಷಗಳ ಹಿಂದೆಯೇ ಸರ್ಕಾರಕ್ಕೆ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದರೂ ಕೊರೋನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಒಪ್ಪಿರಲಿಲ್ಲ. ಈಗ ಮತ್ತೆ ನೀರಿನ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಬೆಂಗಳೂರು ಜಲಮಂಡಳಿಯು ನೀರಿನ ನಿರ್ವಹಣಾ ವೆಚ್ಚದ ಕಾರಣ ನೀಡಿ ದರ ಹೆಚ್ಚಳದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಗೃಹ ಬಳಕೆಯ ನೀರಿನ ದರವನ್ನು ಶೇ.16ರಷ್ಟು ಹಾಗೂ ವಾಣಿಜ್ಯ ಬಳಕೆಯ ನೀರಿನ ದರವನ್ನು ಶೇ.21ರಷ್ಟು ಹೆಚ್ಚಳ ಮಾಡುವಂತೆ ಕೋರಿದೆ. ಒಂದು ವೇಳೆ ರಾಜ್ಯ ಸರ್ಕಾರ ಬೆಂಗಳೂರು ಜಲ ಮಂಡಳಿ ಸಲ್ಲಿಸಿರುವಂತ ನೀರಿನ ದರ ಹೆಚ್ಚಳದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ರೇ, ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ದರ ಏರಿಕೆಯ ಬರೆ ಬೀಳಲಿದೆ.

ಇನ್ನೂ ಪ್ರತಿ ವರ್ಷ ದರ ಏರಿಕೆಯ ಅಧಿಕಾರವನ್ನು ಇನ್ಮುಂದೆ ನಮಗೆ ನೀಡಬೇಕೆಂಬ ಗಂಭೀರ ಪ್ರಸ್ತಾವನೆ BWSSB ಸರ್ಕಾರಕ್ಕೆ ಸಲ್ಲಿಸಿದೆ.

Edited By :
Kshetra Samachara

Kshetra Samachara

10/05/2022 07:49 pm

Cinque Terre

4.7 K

Cinque Terre

0

ಸಂಬಂಧಿತ ಸುದ್ದಿ