ಬೆಂಗಳೂರು - ಬೆಂಗಳೂರು ಅಭಿ ವೃದ್ಧಿ ಪ್ರಾಧಿಕಾರ ಉದ್ದೇಶಿತ ಡಾ.ಶಿವರಾಮ್ ಕಾರಂತ್ ಬಡಾ ವಣೆಯ ಸುಮಾರು 480 ಕಟ್ಟಡ ಗಳನ್ನು ಸರ್ವೋಚ್ಚ ನ್ಯಾಯಾಲ ಯವು ಸಕ್ರಮಗೊಳಿಸಿ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಎ ವಿ ಚಂದ್ರ ಶೇಖರ ಸಮಿತಿ ಸಲ್ಲಿಸಿದ 14 ನೇ ವರದಿಯನ್ನು ಅಂಗೀಕರಿಸಿದ ಸರ್ವೋಚ್ಚ ನ್ಯಾಯಾಲಯ ಈ ಕಟ್ಟಡಗಳನ್ನು ಸಕ್ರಮಗೊಳಿಸಿದೆ. ಸಮಿತಿ ನೀಡಿದ ವರದಿ ಆಧಾರದ ಮೇಲೆ 2018ಕ್ಕಿಂತ ಮುಂಚೆ ಸ್ಥಳೀಯ ಪ್ರಾಧಿಕಾರದ ಅನುಮತಿ ಪಡೆದು ಕಟ್ಟಿದ ಕಟ್ಟಡಗಳ ಮಾಲೀ ಕರು ಸಲ್ಲಿಸಿದ ದಾಖಲೆಗಳ ಮೇಲೆ ಸರ್ವೋಚ್ಚ ನ್ಯಾಯಾಲಯವು ಈ ಕಟ್ಟಡಗಳನ್ನು ಸಕ್ರಮಗೊಳಿಸಿ ಆದೇಶಿಸಿದೆ.
ನ್ಯಾಯಾಲಯದ ಆದೇಶದಂತೆ ಡಾ.ಶಿವರಾಮ ಕಾರಂತ್ ಬಡಾವಣೆ ವ್ಯಾಪ್ತಿಯ ಕಟ್ಟಡಗಳ ಮಾಲೀಕರಿಗೆ ಬಿಡಿಎ ಸಕ್ರಮ ಪ್ರಮಾಣ ಪತ್ರವನ್ನು ವಿತರಿಸುವಂತೆಯೂ ಹಾಗೂ ಕಾನೂನು ರೀತಿಯ ಬೆಟರ್ ಮೆಂಟ್ ಶುಲ್ಕ ವಿಧಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. ಇನ್ನೂ ಸುಪ್ರೀಂ ಕೋರ್ಟ್ ಇಲ್ಲಿಯ ತನಕ 2825 ಕಟ್ಟಡವನ್ನು ಸಕ್ರಮಗೊಳಿಸಿ ಆದೇಶಿಸಿದೆ.
Kshetra Samachara
12/05/2022 05:13 pm