ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿರುವ Horizontal Coil Mounting ವಿನ್ಯಾಸದಿಂದ Vertical Coil Mounting ವಿನ್ಯಾಸಕ್ಕೆ ಬದಲಿಸುವ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ ನಾಳೆ ದಿನಾಂಕ 15-05-2022ರಿಂದ 28-06-2022 (45 ದಿನಗಳ)ವರೆಗೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.

ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಪೀಣ್ಯ, ಮೇಡಿ ಅಗ್ರಹಾರ ಅಥವಾ ಕೆಂಗೇರಿ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದು. ಈ ಬಗ್ಗೆ ರಾಜರಾಜೇಶ್ವರಿ ನಗರ ವಲಯ ಕಾರ್ಯಪಾಲಕ ಇಂಜಿನಿಯರ್ (ವಿದ್ಯುತ್)ರವರು ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

14/05/2022 06:41 pm

Cinque Terre

3.85 K

Cinque Terre

0

ಸಂಬಂಧಿತ ಸುದ್ದಿ