ವರದಿ: ಬಲರಾಮ್ ವಿ
ಬೆಂಗಳೂರು: ಬೆಂಗಳೂರಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಮನೆಗೆ ನುಗ್ಗಿದ ಪರಿಣಾಮ ಜನರ ಪಾಡು ಕೇಳುವವರು ಇಲ್ಲದಂತಾಗಿದೆ.
ಮಹದೇವಪುರ ಕ್ಷೇತ್ರದ ವಾರಣಾಸಿಯಲ್ಲಿ ಚರಂಡಿ ನೀರು ಮನೆಗಳಿಗೆ ನುಗ್ಗಿದ ಹಿನ್ನೆಲೆಯಲ್ಲಿ ಅಲ್ಲಿನ ನಿವಾಸಿಗಳು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು ವರ್ಷಗಳ ಹಿಂದೆ ಅಧಿಕ ಮಳೆಯಿಂದ ಕೆರೆ ಒಡೆದ ಪರಿಣಾಮ ಚರಂಡಿ ಸರಾಗವಾಗಿ ಹರಿಯದೇ ಮನೆಗಳಿಗೆ ನುಗ್ಗುತ್ತಿದೆ. ಪ್ರತಿ ವರ್ಷವೂ ಇದೇ ಸಮಸ್ಯೆಯನ್ನು ಎದುರುಸುತ್ತಿದ್ದೇವೆ.
ಸ್ಥಳೀಯ ಶಾಸಕರು ಸ್ಥಳಕ್ಕೆ ಭೇಟಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ರಾತ್ರಿ ವೇಳೆ ಹಾವು ಸೇರಿದಂತೆ ಕೀಟಗಳು ಕಾಣಿಸುಕೊಳ್ಳುತ್ತೀವೆ. ಇದರಿಂದ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುವಂತಾಗಿದೆ ಎಂದು ಸ್ಥಳೀಯರಾದ ಮೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Kshetra Samachara
22/05/2022 09:10 pm