ಬೆಂಗಳೂರು: ಬೆಂಗಳೂರು ನಗರದ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸದ ಕಾರ್ಮಿಕರಿಗೆ ಉಚಿತವಾಗಿ ನೀಡುತ್ತಿದ್ದ ʼಸಹಾಯ ಹಸ್ತʼ ಪಾಸುಗಳ ವಿತರಣೆಯನ್ನು ಇತ್ತೀಚೆಗೆ ಬಿಎಂಟಿಸಿ ಸ್ಥಗಿತ ಮಾಡಿತ್ತು. ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದಿನಿಂದ ಮತ್ತೆ ಪಾಸ್ ನೀಡಲು ಬಿಎಂಟಿಸಿ ತೀರ್ಮಾನಿಸಿದೆ.
ಹೌದು... ಕಟ್ಟಡ ಕಾರ್ಮಿಕರ ಕ್ಷೇಮಾ ಭಿವೃದ್ಧಿ ಮಂಡಳಿಯಿಂದ ಕಳೆದ ಡಿಸೆಂಬರ್ ನಿಂದ ಇಲ್ಲಿಯವರೆಗೆ ಅಂತಂದ್ರೆ ಐದು ತಿಂಗಳಿಂದ 40 ಕೋಟಿ ಹಣ ಬಾಕಿಯಿದೆ. ಈ ಬಗ್ಗೆ ವರದಿ ಹಿನ್ನೆಲೆಯಲ್ಲಿ ಬಿಎಂಟಿಸಿ ಮೇಲೆ ಒತ್ತಡ ಹೆಚ್ಚಾಗಿತ್ತು.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ, ಇಂದಿನಿಂದ ಮತ್ತೆ ಕಾರ್ಮಿಕರಿಗೆ ಪಾಸ್ ನೀಡಲು ಮುಂದಾಗಿದೆ.
ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣಿಸಲು ನೋಂದಾಯಿತ ನಿರ್ಮಾಣ ಕಾರ್ಮಿಕರಿಗೆ ನೀಡುವ ರಿಯಾಯಿತಿ ಬಸ್ ಪಾಸ್ ಇದಾಗಿದೆ. ಈ ಸೌಲಭ್ಯ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಯಂ ಆಗಿ ವಾಸವಾಗಿರುವ ನೋಂದಾಯಿತ ನಿರ್ಮಾಣ ಕಾರ್ಮಿಕರು ಬೆಂಗಳೂರಿನಲ್ಲಿ ಕೆಲಸದ ಸ್ಥಳಕ್ಕೆ ಪ್ರಯಾಣಿಸಲು ಬಿಎಂಟಿಸಿ ಬಸ್ ಪಾಸ್ ಪಡೆಯಲು ಈ ನಿಯಮದಡಿ ಅರ್ಹರಾಗಿರುತ್ತಾರೆ.
Kshetra Samachara
03/06/2022 07:37 pm