ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಮೂರು ದಿನ ಮುಂದುವರಿಕೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುತ್ತಿದ್ದು ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಮಿಂಚಿನಿಂದ ಕೂಡಿದ ಭಾರಿ ಮಳೆಯಾಗುವ ಲಕ್ಷಣಗಳಿವೆ ಎಂದು ಹೇಳಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂ ಗ್ರಾಮಾಂತರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದೆ ಎಂದು ಹೇಳಿದೆ.

ಎಲ್ಲೆಲ್ಲಿ ಸಾಧಾರಣ ಮಳೆ ?

ಕೊಡಗು, ತುಮಕೂರು, ಹಾಸನ, ಚಾಮರಾಜನಗರ, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಬೀದರ್, ಬೆಳಗಾವಿ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದ್ದು ಕೆಲವೆಡೆ ಮಾತ್ರ ಭಾರೀ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆ:

ನೈಋತ್ಯ ಮುಂಗಾರು ಕಳೆದ ಎರಡು ವಾರಗಳಿಂದ ದುರ್ಬಲಗೊಂಡು ವಾಡಿಕೆಗಿಂತ ಶೇ.32.7ರಷ್ಟು ಕಡಿಮೆ ಮಳೆ ರಾಜ್ಯದಲ್ಲಾಗಿದೆ. ಜೂನ್ 1 ರಿಂದ ರಾಜ್ಯದ ದಕ್ಷಿಣ ಒಳನಾಡು ಹೊರತುಪಡಿಸಿ ಉಳಿದೆಲ್ಲ ಭಾಗಗಳಲ್ಲಿ ಮಳೆ ಕೊರತೆ ಕಂಡುಬಂದಿದೆ ಎಂದು ಹೇಳಿದೆ

ಮಲೆನಾಡು ಕರಾವಳಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ:

ಉತ್ತರ ಒಳನಾಡಿನಲ್ಲೂ ಶೇ 13 ರಷ್ಟು ಕಡಿಮೆ ಮಳೆಯಾಗಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಕ್ರಮವಾಗಿ ಶೇ 59 ಹಾಗೂ ಶೇ 64ರಷ್ಟು ಮಳೆ ಕೊರತೆ ಕಂಡುಬಂದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Edited By : Nagesh Gaonkar
PublicNext

PublicNext

17/06/2022 08:54 pm

Cinque Terre

33.62 K

Cinque Terre

0

ಸಂಬಂಧಿತ ಸುದ್ದಿ