ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಂಚಾರಿಗಳ ಉಸಿರುಗಟ್ಟಿಸುವ ಕೆಸರುಗುಂಡಿ ರಸ್ತೆಗಳು!

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು‌ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಯಡವನಹಳ್ಳಿ ವಾರ್ಡ್ ನಂಬರ್ 4 ಶೋಭಾ ಬಡಾವಣೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ರಸ್ತೆಗಳು ಕೆಸರುಗದ್ದೆಗಳಾಗಿ ಬದಲಾಗಿದೆ.

ಇನ್ನು, ಇಲ್ಲಿನ ರಸ್ತೆಯಲ್ಲಿ ಸಂಚರಿಸಬೇಕಾದರೆ ವಾಹನ ಸವಾರರು ಮತ್ತು ಪಾದಚಾರಿಗಳು ಜೀವವನ್ನು ಕೈಯಲ್ಲಿ ಹಿಡಿದುಕೊಂಡೇ ಸಂಚರಿಸಬೇಕಾಗಿದೆ. ಮಳೆ ಬಂದ ಸಂದರ್ಭದಲ್ಲಿ ರಸ್ತೆಗಳೆಲ್ಲ ಕೆಸರುಗದ್ದೆಗಳಂತಾಗುತ್ತದೆ. ವಿದ್ಯಾರ್ಥಿಗಳ ಸಹಿತ ಹಿರಿಯರು ಈ ಗುಂಡಿ ರಸ್ತೆಯಲ್ಲಿ ಬಿದ್ದು ಗಾಯಗೊಂಡ ಹಲವು ಘಟನೆಗಳೂ ಈಗಾಗಲೇ ನಡೆದಿದೆ.

ಈ ಬಗ್ಗೆ ಪಿಡಿಒಗೆ ನಾಲ್ಕು ಬಾರಿ ಮನವಿಯನ್ನು ಸಲ್ಲಿಸಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ ಅಂತ ಸ್ಥಳೀಯರಾದ ಮುರಳಿ ರೆಡ್ಡಿ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವರೇ ಕಾದು ನೋಡೋಣ.

Edited By :
PublicNext

PublicNext

11/07/2022 09:29 pm

Cinque Terre

42.49 K

Cinque Terre

1

ಸಂಬಂಧಿತ ಸುದ್ದಿ