ಬೆಂಗಳೂರು: ಬೀದಿ ವ್ಯಾಪಾರಿಗಳು ತಮ್ಮ ವ್ಯಾಪಾರ ಚಟುವಟಿಕೆಯನ್ನು ಉತ್ತಮವಾಗಿ ಆನ್ ಲೈನ್ “ಮೇ ಭಿ ಡಿಜಿಟಲ್ ಹೂ” ಅಡಿಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಪಾಲಿಕೆ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಆಚರಣೆಯ ಅಂಗವಾಗಿ ಪಾಲಿಕೆಯ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಇಂದು ಬೀದಿ ಬದಿ ವ್ಯಾಪಾರಿಗಳ ಸ್ವ-ನಿಧಿ ಮಹೋತ್ಸವ ಕಾರ್ಯಕ್ರಮಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬೀದಿ ವ್ಯಾಪಾರಿಗಳ ಕುಟುಂಬದವರಿಂದ ಕಲೆ,ಜಾನಪದ, ನೃತ್ಯ, ಹಾಡು, ರಂಗೋಲಿ ಸ್ಪರ್ಧೆ ಇತ್ಯಾದಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಜೊತೆಗೆ ವ್ಯಾಪಾರಿಗಳ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಗೌರವಿಸಲಾಗುವುದು ಎಂದರು.
ಅರ್ಹ ಫಲಾನುಭವಿಗಳ ಪುರಸ್ಕಾರ:
ಯೋಜನೆಯನ್ನು ಸದುಪಯೋಗಮಾಡಿಕೊಂಡಿರುವ ಅರ್ಹ ಫಲಾನುಭವಿಗಳನ್ನು ಪುರಸ್ಕರಿಸಲಾಗುವುದು. ಅದೇ ರೀತಿ, ಬೀದಿ ಬದಿ ವ್ಯಾಪಾರಿಗಳ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಕ್ರಿಯಾಶೀಲವಾಗಿ ಪಟ್ಟಣ ಮಾರಾಟ ಸಮಿತಿಯ ಸದಸ್ಯರನ್ನು ಗುರುತಿಸಿ ತೊಡಗಿಸಿಕೊಂಡಿರುವವರನ್ನು ಗುರುತಿಸಿಲಾಗುವುದು ಎಂದರು.
Kshetra Samachara
19/07/2022 07:52 am