ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಬ್ಬಾಳ ಬಳಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸೂಚನೆ ...!

ಬೆಂಗಳೂರು : ವಾಹನ ಸಂಚಾರ ಸಂದರ್ಬದಲ್ಲಿ ಪಾದಚಾರಿಗಳಿಗೆ ತೊಂದರೆ ಆಗದಂತೆ ಹೆಬ್ಬಾಳ ಜಂಕ್ಷನ್ ಬಳಿ ಹಾದು ಹೋಗುವ ರೈಲ್ವೇ ಹಳಿಯ ಕೆಳಭಾಗದಲ್ಲಿ ಪಾದಚಾರಿ ಸುರಂಗ ಮಾರ್ಗ ನಿರ್ಮಾಣ ಮಾಡುವಂತೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ನಗರ ಸಂಚಾರ ದಟ್ಟಣೆ ನಿರ್ವಹಣೆ ಕುರಿತು ವಿಧಾನ ಸೌಧದಲ್ಲಿ ನಡೆದ ವಿವಿಧ ಇಲಾಖೆ ಗಳ 4 ನೇ ಜಂಟಿ ಸಮಾ ಲೋಚನೆ ಸಭೆಯಲ್ಲಿ ಬಿಡಿಎ , ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ, ಸಂಚಾರ ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.

ಈ ಸಂದರ್ಭದಲ್ಲಿ ಹೆಬ್ಬಾಳ ಜಂಕ್ಷನ್ ಬಳಿ ಆಗ್ತಿರುವ ಸಂಚಾರ ದಟ್ಟಣೆ ನಿಯಂತ್ರಣ ಕುರಿತು ಬಹುಮುಖ್ಯ ವಾಗಿ ಚರ್ಚೆಗಳು ಆಗಿವೆ. ಆ ಹಿನ್ನೆಲೆಯಲ್ಲಿ ರೈಲ್ವೇ ಹಳಿಯ ಕೆಳ ಭಾಗದಲ್ಲಿ ಪಾದಚಾರಿಗಳಿಗೆ ಸುರಂಗ ಮಾರ್ಗದ ವ್ಯವಸ್ಥೆ ಮಾಡಬೇಕು. ಈ ಸಂಬಂಧ ರೈಲ್ವೇ ಇಲಾಖೆಯ ಜತೆ ಮಾತುಕತೆ ನಡೆಸುವಂತೆ ರಾಕೇಶ್ ಸಿಂಗ್ ಸೂಚನೆ ನೀಡಿದರು.

Edited By : Nirmala Aralikatti
Kshetra Samachara

Kshetra Samachara

19/07/2022 01:43 pm

Cinque Terre

2.36 K

Cinque Terre

0

ಸಂಬಂಧಿತ ಸುದ್ದಿ