ವರದಿ - ಗಣೇಶ್ ಹೆಗಡೆ
ಬೆಂಗಳೂರು: ಫ್ರೀಡಂ ಪಾರ್ಕ್ ಬಹುಮಹಡಿ ಕಟ್ಟಡ ಕಳಪೆ ಕಾಮಗಾರಿ ಕೂಡಿರೋದು ಬೆಳಕಿಗೆ ಬಂದಿದೆ. ಪಾರ್ಕಿಂಗ್ ತಳ ಮಹಡಿಯಲ್ಲಿ ನೀರು ಸೋರಿಕೆ ಆಗ್ತಿದೆ. ಆದರೂ ಪಾಲಿಕೆ ಕೆಲವೇ ದಿನದಲ್ಲಿ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ತಿದೆ.
ಇನ್ನೂ ಅಂದಾಜು 79 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಬಹುಮಹಡಿ ಪಾರ್ಕಿಂಗ್ ಬಿಲ್ಡಿಂಗ್ ಅನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಪಾಲಿಕೆಯ ಈ ಹೊಸ ಪಾರ್ಕಿಂಗ್ ಕಟ್ಟಡದ ಗುತ್ತಿಗೆ ಪಡೆಯಲು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಾರು, ದ್ವಿಚಕ್ರ ವಾಹನಗಳು ಸೇರಿದಂತೆ ಸುಮಾರು ಒಂದು ಸಾವಿರಕ್ಕೂ ಅಧಿಕ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಇಲ್ಲಿ ಮಾಡಲಾಗಿದೆ.
ಪಾಲಿಕೆಯಿಂದ ವಾರ್ಷಿಕ 4.5 ಕೋಟಿ ಆದಾಯ ನಿರೀಕ್ಷಿಸಲಾಗಿದೆ. ಇಷ್ಟೊಂದು ದೊಡ್ಡ ಮೊತ್ತದ ಆದಾಯ ಸಿಗುತ್ತದೋ ಇಲ್ಲವೋ ಎನ್ನುವ ಅನುಮಾನ ಗುತ್ತಿಗೆದಾರರಿಗೆ ಕಾಡುತ್ತಿದೆ. ಈ ಹಿನ್ನೆಲೆ ಗುತ್ತಿಗೆದಾರರು ಟೆಂಡರ್ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಕಳೆದ ಒಂದು ತಿಂಗಳಿಂದ ಪಾರ್ಕಿಂಗ್ ಟೆಂಡರ್ ಕರೆದರೂ ಯಾವುದೇ ಗುತ್ತಿಗೆ ಕಂಪನಿಗಳು ಮುಂದೆ ಬಂದಿಲ್ಲ ಎಂದು ಹೇಳಲಾಗುತ್ತಿದೆ.
ಅದ್ರಲ್ಲೂ ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಟೆಂಡರ್ ಹಾಕಿದ್ದ ನಾಲ್ಕು ಕಂಪನಿಗಳು ಹಿಂದೇಟು ಹಾಕುತ್ತಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Kshetra Samachara
22/07/2022 06:19 pm