ವರದಿ: ಗೀತಾಂಜಲಿ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ನೂರಾರು ಸಂಖ್ಯೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಜನರು ಭಾಗಿಯಾಗಿದ್ದಾರೆ.
ಚಿಂತಕ ಚಕ್ರವರ್ತಿ ಸೂಲಿಬೆಲೆ, ಚಿತ್ರ ನಟ-ನಟಿಯರು, ಸಾಹಿತಿಗಳು ಭಾಗಿಯಾಗಲಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಮುಖಾಂತರ ಅಭಿಯಾನ ಆರಂಭವಾಗಿದ್ದು, ಪ್ರತಿಭಟನೆ ಬಳಿಕ ಮಧ್ಯಾಹ್ನ ಸಿಎಂಗೆ ಉತ್ತರ ಕನ್ನಡ ಜಿಲ್ಲೆಯ ಮುಖಂಡರು ಮನವಿ ನೀಡಲಿದಾರೆ. ಆಸ್ಪತ್ರೆ ನಿರ್ಮಿಸುವ ಬಗ್ಗೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಶಿವರಾಮ್ ಹೆಬ್ಬಾರ್ ಈಗಾಗಲೇ ಭರವಸೆ ನೀಡಿದ್ದಾರೆ.
ಸಿಎಂ ಆಗಸ್ಟ್ ಮೊದಲ ವಾರ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಹೋಗಲಿದ್ದಾರೆ. ಈ ವೇಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕೆಂದು ಜಿಲ್ಲೆ ಜನರು ಒತ್ತಾಯಿಸಲಿದ್ದಾರೆ.
PublicNext
30/07/2022 01:24 pm