ಆನೇಕಲ್: ಇಂದು ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಅಂಡರ್‌ಪಾಸ್ ಸಂಪೂರ್ಣ ಜಲಾವೃತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಏಳರಲ್ಲಿ ಹೊಸೂರು ರಸ್ತೆಯ ಹೆಬ್ಬಗೊಡಿ ಅಂಡರ್‌ಪಾಸ್‌ನಲ್ಲಿ ನೀರು ನಿಂತಿದೆ.
ಅಪಘಾತ ತಪ್ಪಿಸುವ ನಿಟ್ಟಿನಲ್ಲಿ ಅಂಡರ್ ಪಾಸ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಅವೈಜ್ಞಾನಿಕ ಕಾಮಗಾರಿ, ನಿರ್ವಹಣೆ ಕೊರತೆಯಿಂದ ಅಂಡರ್ ಪಾಸ್ ನೆನಗುದಿದೆ ಬಿದ್ದಿದೆ. ಮಳೆ ಬಂದಾಗಲೆಲ್ಲ ಇದೇ ಪರಿಸ್ಥಿತಿ ಎದುರಾಗುತ್ತದೆ. ಇನ್ನು ನೀರಲ್ಲಿ ಹೋಗಲಾಗದೆ ರಸ್ತೆದಾಟಲು ಸಾಧ್ಯವಾಗದೇ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಮೆಟ್ರೋ ಕಾಮಗಾರಿ ಮಾಡುತ್ತಿದ್ದ ಇವರು ಸಹ ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
Kshetra Samachara
06/08/2022 05:49 pm