ಆನೇಕಲ್ : ಹದಗೆಟ್ಟ ರಸ್ತೆ ಗುಂಡಿಗೆ ಮೀನು ಬಿಟ್ಟು,ನಡು ರಸ್ತೆಯಲ್ಲಿ ಗುಂಡಿಗೆ ಗಾಳ ಹಾಕಿ ಮೀನು ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ದೊಮ್ಮಸಂದ್ರ-ಸರ್ಜಾಪುರ ಮುಖ್ಯರಸ್ತೆಯಲ್ಲಿ ನಡೆದಿದೆ.. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ
ಇನ್ನು ಆನೇಕಲ್ ತಾಲೂಕಿನಾದ್ಯಂತ ರಸ್ತೆಗಳಲ್ಲಿ ಭಾರಿ ಗಾತ್ರದ ಗುಂಡಿಗಳ ಇರುವ ಹಿನ್ನೆಲೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಬಿಎಸ್ಪಿ ಪಕ್ಷದ ಮುಖಂಡ ಡಾಕ್ಟರ ಸೀನಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಅಲ್ಲದೆ ಸರ್ಜಾಪುರ ಬೆಂಗಳೂರು ಮುಖ್ಯರಸ್ತೆ ಬಂದ್ ಮಾಡಿದ ಪರಿಣಾಮ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು. ಇನ್ನೂ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬರಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಶೀಘ್ರ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
PublicNext
08/08/2022 07:38 pm