ಬೆಂಗಳೂರು: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದಲ್ಲಿ ಗ್ರಾನೈಟ್ ಸ್ಲರಿ ನೀರನ್ನು ಕೆರೆಗೆ ಬಿಡಲಾಗಿದೆ. ಅಲ್ಲದೆ ಮಳೆ ಬಂದ ಸಂದರ್ಭದಲ್ಲಿ ಗ್ರಾನೈಟ್‌ನ ಸ್ಲರಿ ರಸ್ತೆಯಲ್ಲಿ ನಿಂತು ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿಯನ್ನು ಉಂಟು ಮಾಡುತ್ತಿದೆ.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳ ಗಮನಕ್ಕೂ ತಂದ್ರೂ ಸಹ ಯಾವುದೇ ಪ್ರಯೋಜನಗಳಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕಲ್ಲುಬಾಳು ರಸ್ತೆ ಬದಿಯಲ್ಲಿರುವ ಕೆರೆಗೆ ರಾತ್ರೋರಾತ್ರಿ ಅಕ್ರಮವಾಗಿ ಕೊಳವೆ ಪೈಪ್ ಮೂಲಕ ಗ್ರಾನೈಟ್ ಸ್ಲರಿ ನೀತು ಬಿಡಲಾಗುತ್ತಿದೆ. ಇನ್ನು ಈ ಮಧ್ಯೆ ಕೆರೆಯನ್ನು ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಸ್ವಚ್ಛಗೊಳಿಸಿ ರಕ್ಷಣೆ ಮಾಡಲಾಗುತ್ತಿದೆ. ಆದರೆ ಬಲಾಡ್ಯರ ಕುಮ್ಮಕ್ಕಿನಿಂದ ಗ್ರಾನೈಟ್ ಸ್ಲರಿ ನೀರನ್ನು ಕೆರೆಗೆ ಬಿಟ್ಟ ಪರಿಣಾಮ ಕೆರೆ ಕಲುಷಿತವಾಗಿ ಪ್ರಾಣಿ ಪಕ್ಷಿಗಳಿಗೆ ಮತ್ತು ಜಾನುವಾರಗಳಿಗೆ ಅನಾನುಕೂಲವಾಗುವ ಸಾಧ್ಯತೆ ಇದೆ .. ಇನ್ನಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.
ಹರೀಶ್ ಗೌತಮನಂದ ಪಬ್ಲಿಕ್ ನೆಕ್ಸ್ಟ್ ಆನೇಕಲ್
Kshetra Samachara
17/08/2022 10:44 am