ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಬಿಎಂಪಿ ವಿರುದ್ಧ ಐಟಿ ಕಂಪನಿಗಳು ಗರಂ; ಪ್ರತ್ಯೇಕ ಪಾಲಿಕೆ ಕೋರಿ ಸರ್ಕಾರಕ್ಕೆ ಪತ್ರ

ಬೆಂಗಳೂರು: ಧಾರಾಕಾರ ಮಳೆಯಿಂದ ಬೆಂಗಳೂರಿನ ತಗ್ಗು ಪ್ರದೇಶಗಳು ಜಲಾವೃತಗೊಂಡು ಭಾರೀ ಪ್ರಮಾಣದ ಹಾನಿಯಾಗಿದೆ. ಅದರಲ್ಲೂ ನೂರಾರು ಐಟಿ-ಬಿಟಿ ಕಂಪನಿಗಳಿರುವ ಕೇಂದ್ರೀಯ ರೇಷ್ಮೆ ಮಂಡಳಿಯಿಂದ ಕೆ.ಆರ್‌.ಪುರ ಜಂಕ್ಷನ್‌ವರೆಗಿನ 17 ಕಿ.ಮೀ. ರಸ್ತೆಯಲ್ಲಿ ಪ್ರವಾಹ ಉಂಟಾಗಿತ್ತು. ಇದರಿಂದಾಗಿ ಐಟಿ ಕಂಪನಿಯ ಅಧಿಕಾರಿಗಳು, ಉದ್ಯೋಗಿಗಳು ಎದುರಿಸಿದ ಸಂಕಷ್ಟ ಅಷ್ಟಿಷ್ಟಲ್ಲ. ಇದರಿಂದಾಗಿ ಐಟಿ ಕಂಪನಿಗಳು ಬಿಬಿಎಂಪಿ ವಿರುದ್ಧ ಗರಂ ಆಗಿದ್ದು, ಪ್ರತ್ಯೇಕ ಪಾಲಿಕೆ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಹೌದು. ಐಟಿ-ಬಿಟಿ ಕಂಪನಿಗಳು ಹೆಚ್ಚಾಗಿರುವ 17 ಕಿ.ಮೀ ಹೊರ ವರ್ತುಲ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶವನ್ನು ಪ್ರತ್ಯೇಕ ಮುನ್ಸಿಪಲ್ ವಲಯವೆಂದು ಘೋಷಿಸಬೇಕೆಂದು ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ (ಒಆರ್‌ಆರ್‌ಸಿಎ) ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಅಲ್ಲದೆ ಐಟಿ-ಬಿಟಿ ಕಾರಿಡಾರ್ ಅಭಿವೃದ್ಧಿಗೆ ವಿಶೇಷ -ಗ್ರೇಷಿಯಾ ಅನುದಾನ ಒದಗಿಸುವುದು ಸೇರಿದಂತೆ 13 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಭಾರಿ ಮಳೆ ಹಾಗೂ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದ ಪರಿಣಾಮ ಬೆಳ್ಳಂದೂರು ಬಳಿ ಆರ್‌ಎಂಝಡ್ ಇಕೋಸ್ಪೇಸ್ ಆವರಣ ಮತ್ತು ಸರ್ಜಾಪುರ ರಸ್ತೆಯಲ್ಲಿನ ವಿಪ್ರೋ ಸಂಸ್ಥೆ ಸೇರಿ ಅನೇಕ ಐಟಿ ಕಂಪನಿಗಳು ಮತ್ತು ವಸತಿ ಬಡಾವಣೆಗಳು ಜಲಾವೃತ ಆಗಿದ್ದವು. ಪ್ರವಾಹ ಸೃಷ್ಟಿಯಾದ ಇಕೋಸ್ಪೇಸ್ ಹಾಗೂ ಸುತ್ತಮುತ್ತಲಿನ ಸ್ಥಳಗಳನ್ನು ಕೂಡಲೇ ದುರಸ್ತಿಗೊಳಿಸಬೇಕು. ಹೊರ ವರ್ತುಲ ರಸ್ತೆಯಲ್ಲಿ ನಿರ್ಮಿಸಲಾಗುತ್ತಿರುವ ಮೆಟ್ರೋ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಮೆಟ್ರೋ ಸಂಸ್ಥೆ ಮತ್ತು ಒಆರ್‌ಆರ್‌ಸಿಎ ಸಮನ್ವಯ ಸಾಧಸಿಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ ನಡೆಸಬೇಕು. ಐಟಿ ಕಾರಿಡಾರ್ ವ್ಯಾಪ್ತಿಯಲ್ಲಿ ಮುಖ್ಯ ರಸ್ತೆಗಳ ಅಭಿವೃದ್ಧಿಗೆ 2019ರಲ್ಲಿ ಅನುಮೋದನೆ ನೀಡಿದ್ದು, ಅವುಗಳನ್ನು 6 ತಿಂಗಳೊಳಗೆ ಪೂರ್ಣಗೊಳಿಸಬೇಕು. ಮೆಟ್ರೋ ಮಾರ್ಗ ನಿರ್ಮಾಣದ ವೇಳೆ ಮುಖ್ಯ ರಸ್ತೆ ಮತ್ತು ಸರ್ವಿಸ್‌ ರಸ್ತೆಗಳನ್ನು ಸುಸ್ಥಿತಿಯಲ್ಲಿಟ್ಟು ಟ್ರಾಫಿಕ್‌ ಮತ್ತು ಸಿಗ್ನಲ್‌ ಫ್ರೀ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕು. ಜಂಕ್ಷನ್‌ಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರನ್ನು ನಿಯೋಜಿಸಬೇಕು ಎಂದು ಒಆರ್‌ಆರ್‌ಸಿಎ ಆಗ್ರಹಿಸಿದೆ.

Edited By : Vijay Kumar
Kshetra Samachara

Kshetra Samachara

14/09/2022 01:12 pm

Cinque Terre

3.78 K

Cinque Terre

0

ಸಂಬಂಧಿತ ಸುದ್ದಿ