ಆನೇಕಲ್: ಸರ್ಕಾರಿ ಶಾಲೆಗೆ ಶಿಕ್ಷಕರನ್ನು ಒದಗಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ ಜ್ಞಾನದೀಪ ಶಿಕ್ಷಕರ ಸಂದರ್ಶನ ಕಾರ್ಯಕ್ರಮವನ್ನು ಆನೇಕಲ್ ಪಟ್ಟಣದ ಗುರುಭವನದಲ್ಲಿ ಏರ್ಪಡಿಸಲಾಗಿತ್ತು
ಇನ್ನು ಆನೇಕಲ್ ಸುತ್ತಮುತ್ತ 25ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹುದ್ದೆಗಳಿಗೆ ಸಂದರ್ಶನ ಲಿಖಿತ ಪರೀಕ್ಷೆಗಳನ್ನು ಹಮ್ಮಿಕೊಂಡಿದ್ದರು ಸುಮಾರು 35ರಿಂದ 40 ಶಿಕ್ಷಕರು ಲಿಖಿತ ಪರೀಕ್ಷೆಗೆ ಭಾಗಿಯಾಗಿದ್ದರು.
ಇನ್ನು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ವತಿಯಿಂದ ಶಾಲೆಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಶಿಕ್ಷಕರನ್ನು ಒದಗಿಸುವುದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದು ಇತರ ಅನೇಕ ಯೋಜನೆಗಳನ್ನು ಮಾಡಿಕೊಳ್ಳುತ್ತಿದ್ದೇವೆ.
Kshetra Samachara
26/06/2022 10:57 am