ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಸ್ತೆ ಬದಿ ಮಹಿಳೆ ಶವ ಪತ್ತೆ; ʼಮೂರ್ಛೆ ಕಾಯಿಲೆ ಮರಣಕ್ಕೆ ಕಾರಣʼ

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯ ರಸ್ತೆಬದಿ ವಿವಾಹಿತ ಮಹಿಳೆಯ ಶವ ಪತ್ತೆಯಾಗಿದೆ. ಆಂಧ್ರ ಪ್ರದೇಶದ ಕಡಪಾ ಮೂಲದ ರತ್ನಮ್ಮ (30 ) ಮೃತಪಟ್ಟವರು.

ಅತ್ತಿಬೆಲೆ ಹಾಗೂ ಬಳ್ಳೂರು ರಸ್ತೆ ಸಂಪರ್ಕ ಕಲ್ಪಿಸುವ ಮಾರ್ಗವಾಗಿ ಬರುವ ಬಳ್ಳೂರು ಗೇಟ್‌ ಬಳಿ ಶವ ಪತ್ತೆಯಾಗಿದ್ದು, ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತನಿಖೆ ನಡೆಸಿ, ಮಾಹಿತಿ ಕಲೆ ಹಾಕಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ, ರತ್ನಮ್ಮ ಸಾಕಷ್ಟು ದಿನಗಳಿಂದ ಮೂರ್ಛೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಊಟ ಮಾಡದ ಕಾರಣ ಮೃತಪಟ್ಟಿರುವುದಾಗಿ ತನಿಖೆಯಲ್ಲಿ ಗೊತ್ತಾಗಿದೆ. ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

20/06/2022 08:20 pm

Cinque Terre

3.19 K

Cinque Terre

0

ಸಂಬಂಧಿತ ಸುದ್ದಿ