ವರದಿ - ಗಣೇಶ್ ಹೆಗಡೆ
ಬೆಂಗಳೂರು- ಹೊರಾಂಗಣ ಮತ್ತು ಒಳಾಂಗಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಜನರ ಪ್ರಮಾಣವನ್ನು ಕಡಿತಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆ ಸಮಾರಂಭಗಳಿಗೆ ಸೇರುವ ಜನರ ಸಂಖ್ಯೆಯನ್ನು ಕಡಿತಗೊಳಿಸುವ ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ನಾವು ಸರ್ಕಾರಕ್ಕೆ ಈ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿದ್ದೇವೆ ಎಂದರು.
ಕ್ರಿಸ್‍ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನ ಗುಂಪುಗೂಡಿ ಸಂಭ್ರಮಾಚರಣೆ ನಡೆಸುವುದರಿಂದ ಸೋಂಕು ಉಲ್ಬಣಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಗುಂಪುಗೂಡಲು ಅವಕಾಶ ನೀಡದೆ ತಮ್ಮ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಅವರು ಮನವಿ ಮಾಡಿಕೊಂಡರು.
Kshetra Samachara
02/12/2021 03:26 pm