ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಸರ್ಕಾರ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಅನೇಕ ನಿಯಮ ಜಾರಿ ಮಾಡಿದೆ. ಆದ್ರೆ, ಕೆಎಸ್ ಆರ್ ಟಿಸಿ ಬಸ್ ನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಮಾರ್ಗಸೂಚಿ ಉಲ್ಲಂಘನೆ ಮಾಡಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಸೋಂಕು ನಿಯಂತ್ರಣಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿ ಪ್ರತಿಯೊಬ್ಬರೂ ಅನುಸರಿಸುವಂತೆ ಸೂಚಿಸಿದೆ.
ಆದರೆ, ಶಿವಮೊಗ್ಗದಿಂದ ಆನವೇರಿ ಮಾರ್ಗದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಯಾವೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿಲ್ಲ. ಅಷ್ಟೇ ಅಲ್ಲದೆ, ದೈಹಿಕ ಅಂತರ ಕಾಪಾಡದೇ ಕೋವಿಡ್ ನಿಯಮ ಉಲ್ಲಂಘಿಸಿ, ಪ್ರಯಾಣಿಸಿದ ದೃಶ್ಯ ಕಂಡುಬಂದಿದೆ.
ಕೊರೊನಾ ನಿಯಮಾವಳಿ ಕೆಎಸ್‌ಆರ್ ಟಿಸಿಗೆ ಅನ್ವಯವಾಗುವುದಿಲ್ಲವಾ?, ಕೋವಿಡ್ ರೂಲ್ಸ್ ಕೇವಲ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಮಾತ್ರನಾ?, ಬಸ್ ಗಳಲ್ಲಿ ಜನದಟ್ಟಣೆಗೆ ಯಾಕೆ ಬ್ರೇಕ್ ಬಿದ್ದಿಲ್ಲ? ಬಸ್ ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸುವಂತಿಲ್ಲ ಎಂದು ನಿಗಮ ಆದೇಶ ಹೊರಡಿಸಿದೆ. ಆದರೆ, ಈ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲವಾ? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Kshetra Samachara
08/01/2022 07:54 pm