ಬೆಂಗಳೂರು ದಕ್ಷಿಣ: ಅಕ್ರಮವಾಗಿ ತಲೆ ಎತ್ತಿದ್ದ ಶೆಡ್‌ಗಳನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಮಂಜುನಾಥ ಅವರು ತಹಶೀಲ್ದಾರ್‌ಗೆ ಖುದ್ದಾಗಿ ಮಾಹಿತಿ ನೀಡಿರುವುದಾಗಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ದಕ್ಷಿಣ ಸಭಾ ಕ್ಷೇತ್ರದ ಸರ್ಕಾರಿ ಸ್ವಾಮ್ಯದ ಜಾಗದಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಾಣ ಮಾಡಿ ಮಧ್ಯವರ್ತಿಗಳು ಹಣ ವಸೂಲಿ ಮಾಡುತ್ತಿರುವುದಾಗಿ ಜೂನ್ 8ರಂದು ಪಬ್ಲಿಕ್ ನೆಕ್ಸ್ಟ್ ನಲ್ಲಿ ವಿಸ್ತೃತ ವರದಿ ಮಾಡಿತ್ತು. ಹೀಗಾಗಿ ತಹಶೀಲ್ದಾರ್ ದಿನೇಶ್ ಪಬ್ಲಿಕ್ ನೆಕ್ಸ್ಟ್ ಗೆ ಜತೆ ಮಾಹಿತಿ ನೀಡಿದರು. ಈಗಾಗಲೇ ನನ್ನ ಗಮನಕ್ಕೆ ಬಂದಿದ್ದು ನಿವೃತ್ತ ನ್ಯಾಯಾಧೀಶ ಜೊತೆಗೆ ಮಾತುಕತೆ ನಡೆಸಿ ತೆರವುಗೊಳಿಸುವುದಾಗಿ ಮಾಹಿತಿ ನೀಡಿದ್ದಾರೆ.
ಹೌದು. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹುಲಿಮಂಗಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಕೊಪ್ಪ ಗೇಟ್‌ನಲ್ಲಿ ತಮಿಳುನಾಡು ಮೂಲದ ಶಿವಕುಮಾರ್ ಎಂಬಾತ ಸರ್ವೇ ನಂಬರ್ 109ರಲ್ಲಿ ಸರ್ಕಾರಿ ಸ್ವಾಮ್ಯದ ಜಾಗದಲ್ಲಿ ಅಕ್ರಮವಾಗಿ ಅಂಗಡಿಗಳನ್ನು ನಿರ್ಮಾಣಮಾಡಿ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ ಸುದ್ದಿ ಪ್ರಸಾರ ಮಾಡಿತ್ತು. ಮುಂದಿನ ದಿನಗಳಲ್ಲಿ ತೆರವು ಮಾಡುವುದಾಗಿ ಭರವಸೆ ನೀಡಿದರು.
Kshetra Samachara
13/06/2022 07:42 pm