ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಹಬ್ಬದ ಸಮಯದಲ್ಲಿ ಭದ್ರತೆ ಹಾಗೂ ಗೈಡ್ ಲೈನ್ಸ್ ಬಗ್ಗೆ ಕಮಿಷನರ್ ಮಾಹಿತಿ ನೀಡಿದ್ದಾರೆ.
ಟೌನ್ ಹಾಲ್ ಸಭಾಂಗಣದಲ್ಲಿ ಸಭೆ ಆರಂಭವಾಗಿದೆ. ಸಭೆಯಲ್ಲಿ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್, ಹೆಚ್ಚುವರಿ ಪೊಲೀಸ್ ಆಯುಕ್ತರು, ನಗರದ ಎಲ್ಲಾ ವಿಭಾಗದ ಡಿಸಿಪಿ, ಎಸಿಪಿ, ಹಾಗೂ ಇನ್ಸ್ ಪೆಕ್ಟರ್ಸ್,ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಬರುವ ಏರಿಯಾ ಮುಖಂಡರು, ಧಾರ್ಮಿಕ ಮುಖಂಡರು ಭಾಗಿಯಾಗಿದ್ದಾರೆ.
ಸರ್ಕಾರದ ಗೈಡ್ ಲೈನ್ ಹಾಗೂ ಶಾಂತಿಯುತ ಗಣೇಶೋತ್ಸವನ್ನ ಆಚರಣೆ ಮಾಡಲು ಸಹಕಾರ ನೀಡುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಿದ್ದಾರೆ.
Kshetra Samachara
25/08/2022 02:18 pm