ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2022-23ನೇ ಶೈಕ್ಷಣಿಕ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಯುಜಿಸಿಇಟಿ) ಅರ್ಹತೆ ಪಡೆದಿರುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ. ಕಳೆದ ಬುಧವಾರದಿಂದ ಆರಂಭವಾಗಿದ್ದು, ಇನ್ನೂ 10-12 ದಿನ ನಡೆಯಲಿದೆ.
ಒಟ್ಟು 2,16,559 ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, ಹೀಗೆ ಅರ್ಜಿ ಸಲ್ಲಿಸಿದ 2,10,829 ಆಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವೆರಲ್ಲರ ದಾಖಲೆ ಪರಿಶೀಲನೆ ಕಾರ್ಯ ನಡೆಯುತ್ತಿದೆ ಎಂದು ಕೆಸಿಇಟಿ ನಿರ್ದೇಶಕಿ ರಮ್ಯಾ ಅವರು ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದ್ದಾರೆ.
2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಸಿಇಟಿಯಲ್ಲಿ ಪರಿಗಣಿಸದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಕೆಲವು ವಿದ್ಯಾರ್ಥಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಮುಂದಿನ ವಿಚಾರಣೆಯವರೆಗೆ ಅಂದರೆ ಆಗಸ್ಟ್ 18ರ ವರೆಗೆ 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನೈಜ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸುವುದಿಲ್ಲ. ಸದ್ಯ ದಾಖಲೆ ಪರಿಶೀಲನೆ ಪ್ರಕ್ರಿಯೆ ಆರಂಭಿಕ ಹಂತದಲ್ಲಿದೆ ಎಂದು ಹೈಕೋರ್ಟ್‌ಗೆ ತಿಳಿಸಿದ್ದಾಗಿ ಕೆಸಿಇಟಿ ನಿರ್ದೇಶಕಿ ರಮ್ಯಾ ಹೇಳಿದರು.
PublicNext
13/08/2022 04:58 pm