ಆನೇಕಲ್: ಕಾನೂನಿನ ತಿಳುವಳಿಕೆಯಿಂದ ಸಾರ್ವಜನಿಕರು ತಮ್ಮ ದಿನನಿತ್ಯ ಚಟುವಟಿಕೆಯಲ್ಲಿ ಆತ್ಮವಿಶ್ವಾಸದಿಂದ ತೊಡಗಿಸಿಕೊಳ್ಳಬಹುದೆಂದು ಟೆಲಿ ಲಾ ಸಂಸ್ಥೆಯ ರಾಜ್ಯ ಉಸ್ತುವಾರಿ ಹಾಗೂ ವಕೀಲ ಪುರುಷೋತ್ತಮ್ ಚಿಕ್ಕಹಾಗಡೆ ಮಾಹಿತಿ ನೀಡಿದ್ದಾರೆ.
ಆನೇಕಲ್ ತಾಲ್ಲೂಕಿನ ಗೋಪಾಲ್ ರಾಜು ಕಾಲೇಜಿನಲ್ಲಿ ಕೇಂದ್ರ ಸರಕಾರದ ಕಾನೂನು ಇಲಾಖೆಯ ಭಾಗವಾಗಿರುವ ಟೆಲಿ ಲಾ ವತಿಯಿಂದ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ಕಾನೂನಿನ ಅರಿವನ್ನು ಪಡೆದುಕೊಳ್ಳುವ ಮೂಲಕ ಜಾಗೃತರಾಗಿ ಬದುಕಬೇಕೆಂದು ತಿಳಿಸಿದ್ದಾರೆ.
ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಕಾನೂನಿನ ತಿಳುವಳಿಕೆಯನ್ನು ಪಡೆದುಕೊಂಡು, ತಮ್ಮ ಮನೆಗಳಲ್ಲಿ, ತಮ್ಮ ಊರುಗಳಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯದಲ್ಲಿ ತೊಡಗಬೇಕೆಂದು ಅವರು ಆಶಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಸರಕಾರದ ವಿವಿಧ ಇಲಾಖೆಗಳಿಂದ ವಿದ್ಯಾಭ್ಯಾಸಕ್ಕಾಗಿ ಸಾಕಷ್ಟು ಸೌಲಭ್ಯಗಳಿವೆ. ಆದರೆ, ಅವುಗಳ ಬಗ್ಗೆ ತಿಳುವಳಿಕೆಯಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಹೀಗಾಗಿ ತಮ್ಮ ತಮ್ಮ ಗ್ರಾಮಪಂಚಾಯತ್ ಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಮೀಸಲಾಗಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು, ಸ್ಚಾಭಿಮಾನದಿಂದ ವಿದ್ಯಾಭ್ಯಾಸದಲ್ಲಿ ತೊಡಗಬೇಕೆಂದು ಅವರು ತಿಳಿಸಿದ್ದಾರೆ.
Kshetra Samachara
23/02/2022 08:55 pm