ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು:ಕೋರ್ಟ್ ತೀರ್ಪಿನ ನಂತರ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಡಿಸಿಪಿ ಅನೂಪ್ ಶೆಟ್ಟಿ

ಯಲಹಂಕ:- ಹಿಜಾಬ್ ಪ್ರಕರಣ ಕಳೆದ ತಿಂಗಳು ಏನೆಲ್ಲ ಅವಾಂತರ ಸೃಷ್ಟಿಸಿತ್ತು ಎಂಬುದು ಗೊತ್ತೇ ಇದೆ. ಕಳೆದ ತಿಂಗಳಿಂದ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಉಚ್ಛ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.

ಮಾನ್ಯ ಹೈಕೋರ್ಟ್ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದೆ. ಸಮವಸ್ತ್ರದ ಬಗ್ಗೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹಿಜಾಬ್ ಇಸ್ಲಾಂನಲ್ಲಿ ಅತ್ಯಗತ್ಯವಲ್ಲ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಹೈಕೋರ್ಟ್ ತೀರ್ಪು ನೀಡಿದೆ. ಇದುವರೆಗಿನ ಸಮವಸ್ತ್ರ ನಿಯಮವನ್ನು ಪಾಲಿಸಬೇಕು ಎಂದಿದೆ.

ಮಾನ್ಯ ಹೈಕೋರ್ಟ್ ನ ಮುಖ್ಯನಾಯಾಧೀಶರಾದ ರಿತುರಾಜ್ ಅವಸ್ಥಿ, ಹೈಕೋರ್ಟ್ ‌ನ್ಯಾಯಾದೀಶರಾದ ಕೃಷ್ಣ.ಎಸ್.ದೀಕ್ಷಿತ್ ಹಾಗು ನ್ಯಾಯಾದೀಶರಾದ ಜೈಬುನ್ನೀಸಾ.ಎಂ.ಖಾಜಿ ರವರ ತ್ರಿಸದಸ್ಯಪೀಠ ಮಹತ್ವದ ತೀರ್ಪು ನೀಡಿ ಆದೇಶಿದೆ..

ಹಿಜಾಬ್ ತೀರ್ಪು ಹಿನ್ನಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ಇದರ ಭಾಗವಾಗಿ ಇಂದು ಈಶಾನ್ಯ ವಿಭಾಗದ ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದಾರೆ. ನಮ್ಮ ವ್ಯಾಪ್ತಿಯಲ್ಲಿ ಇದುವರೆಗೆ ಯಾವ ಅಹಿತಕರ ಘಟನೆ ವರದಿಯಾಗಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ.

Edited By :
Kshetra Samachara

Kshetra Samachara

15/03/2022 03:47 pm

Cinque Terre

3.04 K

Cinque Terre

0

ಸಂಬಂಧಿತ ಸುದ್ದಿ