ಬೆಂಗಳೂರು: ಹಿಜಾಬ್ ಧರಿಸಿ ಪರೀಕ್ಷೆ ಬರಲು ಬಂದಿದ್ದ 11 ಜನ ವಿದ್ಯಾರ್ಥಿಗಳನ್ನು ತಡೆದು ಹಿಜಾಬ್ ತೆಗೆಸಿ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯಲು ಅನುಮತಿ ನೀಡಿದ್ದಾರೆ ..
ಹೌದು.. ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯ ನಿತ್ಯಾನಂದ ಶಾಲೆಯ ಎಸ್ಎಸ್ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಸಕಲವಾರ ಗ್ರಾಮದ ಎಂಎಸ್‌ಬಿ ಪ್ರೌಢಶಾಲೆಯ 11 ಜನ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದಿದ್ದರು..ಈ ವೇಳೆ ಸಿಬ್ಬಂದಿ ಅವರನ್ನು ಗೇಟ್ ಮುಂದೆಯೇ ತಡೆದಿದ್ದಾರೆ. ವಿದ್ಯಾರ್ಥಿನಿಯರಿಗೆ ಹಿಜಾಬ್ ಬಿಚ್ಚಿಟ್ಟು ಪರೀಕ್ಷಾ ಕೇಂದ್ರ ಪ್ರವೇಶಿಸಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿತ್ತು. ನಂತರ ಅಲ್ಲಿಗೆ ತೆರಳಿದ ಹನ್ನೊಂದು ಜನ ವಿದ್ಯಾರ್ಥಿನಿಯರು ಹಿಜಾಬ್ ಬಿಚ್ಚಿಟ್ಟು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾದರು. ಇನ್ನು ಶಾಲೆಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಹರೀಶ್ ಗೌತಮನಂದ ಪಬ್ಲಿಕ್ ನೆಕ್ಸ್ಟ್ ಆನೇಕಲ್
PublicNext
28/03/2022 05:38 pm