ಬೆಂಗಳೂರು: ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ತೇರ್ಗಡೆಯಾಗಿದ್ದ ಪಿಎಸ್ಐ ಆಭ್ಯರ್ಥಿಗಳು ನೇಮಕಾತಿಗಾಗಿ ಒತ್ತಾಯಿಸಿ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಸತ್ಯಾಗ್ರಹವನ್ನ ಕೈಬಿಟ್ಟಿದ್ದಾರೆ.
ಮರುಪರೀಕ್ಷೆ ವಿರೋಧಿಸಿ ಕಳೆದ ಮೂರ್ನಾಲ್ಕು ದಿನಗಳಿಂದ ನೂರಾರು ಪಿಎಸ್ಐ ಆಭ್ಯರ್ಥಿಗಳು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದ ಆಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಬೇಕೆಂದು ಆಗ್ರಹಿಸಿದ್ದರು. ಪ್ರತಿಭಟನೆಗೆ ರಾಜ್ಯ ಸರ್ಕಾರ ಮಣಿಯದ ಹಿನ್ನೆಲೆಯಲ್ಲಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಂತೆ ಪ್ರತಿಭಟನೆ ಕೈಗೊಂಡಿದ್ದರು. ಇದೀಗ ಹೋರಾಟ ಕೈ ಬಿಟ್ಟು ಕಾನೂನು ಹೋರಾಟ ನಡೆಸಲು ಚಿಂತನೆ ನಡೆಸಿದ್ದಾರೆ.
PublicNext
03/05/2022 04:26 pm