ಬೆಂಗಳೂರು : ರಾಜ್ಯಾದ್ಯಂತ PSI ಅಕ್ರಮ ನೇಮಕಾತಿ ಪ್ರಕರಣ ಸದ್ದು ಮಾಡುತ್ತಿರುವಾಗ ಶನಿವಾರ ಮತ್ತು ಭಾನುವಾರ ನಡೆಯುವ ಪದವೀಧರ,ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಬಾರಿ ಮುಂಜಾಗೃತೆ ವಹಿಸಲಾಗಿದೆ.
ಮೊದಲ ಬಾರಿಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ರಾಜ್ಯಾದ್ಯಂತ ಶನಿವಾರ ಮತ್ತು ಭಾನುವಾರ ಪರೀಕ್ಷೆಗಳು ನಡೆಯಲಿವೆ.
ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್ ರವರ ನೇತೃತ್ವದ ತಂಡ ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.ದೇವನಹಳ್ಳಿ ಪಟ್ಟಣದ ಪರೀಕ್ಷಾ ಕೇಂದ್ರಗಳಿಗಲ್ಲಿ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಮೊದಲ ಬಾರಿಗೆ ತ್ರಿಮ್ಯಾನ್ ಕಮಿಟಿಯಲ್ಲಿ ಪರೀಕ್ಷಾ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓ ಸೇರಿದಂತೆ ಎಸ್.ಪಿ.ರವರು ತ್ರಿಮ್ಯಾನ್ ಕಮಿಟಿಲಿರುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
SureshBabu Public Next ಬೆಂಗಳೂರು..
PublicNext
19/05/2022 08:17 am