ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು- ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸಿಗುತ್ತಾ ಗ್ರೀನ್ ಸಿಗ್ನಲ್?

ಬೆಂಗಳೂರು- ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ವಕ್ಫ್ ಬೋರ್ಡ್ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಪ್ರಕರಣದ ತುರ್ತು ವಿಚಾರಣೆ ನಡೆಸಿ, ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಲಾಗಿದೆ. ಗಣೇಶೋತ್ಸವ ಆಚರಿಸಲು ರಾಜ್ಯ ಸರ್ಕಾರಕ್ಕೆ ಶುಕ್ರವಾರ ಹೈಕೋರ್ಟ್ ಅನುಮತಿ ನೀಡಿತ್ತು. ಆಗಸ್ಟ್ 31ರಿಂದ ಒಂದು ದಿನದ ಅವಧಿಗೆ ಅನುಮತಿ ನೀಡಿ ವಿಭಾಗೀಯ ಪೀಠ ತೀರ್ಪು ನೀಡಿತ್ತು.

ಈ ಆದೇಶವನ್ನು ಪ್ರಶ್ನೆ ಮಾಡಿ ಈಗ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.ಇಂದು ಸುಪ್ರೀಂಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಹೀಗಾಗಿ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಅನುಮತಿಗಾಗಿ ಹಿಂದೂಪರ ಹಲವು ಸಂಘಟನೆಗಳು ಕಾದು ಕುಳಿತಿವೆ

ಚಾಮರಾಜಪೇಟೆ ಗಣೇಶೋತ್ಸವ ಆಚರಣೆ ಹಿನ್ನಲೆ ಮೈದಾನದ ಸುತ್ತ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. 3 ಡಿಸಿಪಿ, 21 ಎಸಿಪಿ, 47 ಪೊಲೀಸ್ ಇನ್ಸ್ಪೆಕ್ಟರ್,130 ಪೊಲೀಸ್ ಸಬ್ ಇನ್ಸ್ಪೆಕ್ಟರ್,126 ಎಎಸ್ಐ, 900 ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಖಾಕಿ ಟೀಂ ಕಟ್ಟೆಚರವಹಿಸಿದೆ. ಮೈದಾನದ ಸುತ್ತ ಸಿಸಿಟಿವಿ ಅಳವಡಿಸಲಾಗಿದೆ.

Edited By : Abhishek Kamoji
PublicNext

PublicNext

30/08/2022 12:55 pm

Cinque Terre

10.94 K

Cinque Terre

0

ಸಂಬಂಧಿತ ಸುದ್ದಿ