ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಮುಂದಿನ ವಾರದಿಂದ ಆರಂಭಿಸಲು ಬಿಬಿಎಂಪಿ ಚಿಂತನೆ ನಡೆಸಿದೆ.
ಹೈಕೋರ್ಟ್ ಚಾಟಿ ಬೀಸಿದ ಬಳಿಕ ಅಲರ್ಟ್ ಆಗಿರುವ ಬಿಬಿಎಂಪಿ ಅಕ್ರಮವಾಗಿ ತಲೆ ಎತ್ತಿರುವ ಕಟ್ಟಡಗಳ ತೆರವಿಗೆ ಮುಂದಾಗಿದೆ. ಇದೀಗ ಸೋಮವಾರದಿಂದ ಬಿಬಿಎಂಪಿ ಕಾರ್ಯಾಚರಣೆ ಪ್ರಾರಂಭಿಸಲಿದೆ ಎಂಬ ಮಾಹಿತಿ ಲಭಿಸಿದೆ.
ನಕ್ಷೆ ಮಂಜೂರಾತಿ ಪಡೆಯದೇ ಇರುವ ಕಟ್ಟಡಗಳು 5 ಸಾವಿರಕ್ಕೂ ಅಧಿಕವಾಗಿ ಇದೆ. ಈ ಹಿನ್ನೆಲೆಯಲ್ಲಿ ಅಕ್ರಮ ಕಟ್ಟಡ ತೆರವಿಗೆ ಮುಹೂರ್ತ ನಿಗದಿಯಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Kshetra Samachara
21/12/2021 07:23 pm